ರೈತರ ಜಮೀನಿನ ಮೇಲೆ ಕಾಡಾನೆಗಳ ದಾಳಿ -ಬೆಳೆ ನಷ್ಟ: ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಪುರದಾಳ್, ಬೆಳ್ಳೂರು, ತಮ್ಮಡಿಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಾಡಾನೆಗಳ ಗುಂಪು ರೈತರ ಜಮೀನಿನ ಮೇಲೆ ದಾಳಿ ಮಾಡಿ ಬೆಳೆಗಳನ್ನು ಹಾಳುಮಾಡುತ್ತಿದ್ದು  ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ* ವತಿಯಿಂದ ಸೋಮವಾರ ಶಿವಮೊಗ್ಗ ಖಾಸಗಿ ಬಸ್ಸ್ ನಿಲ್ದಾಣದಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಾಯಿತು.
ಕಾಡಾನೆ ದಾಳಿಗೆ ಒಳಗಾದ ಜಮೀನಿನ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವಂತೆ, ಆನೆಗಳು ಗ್ರಾಮ ಹಾಗೂ ರೈತರ ಜಮೀನುಗಳಿಗೆ ಬರದಂತೆ ತಡೆಯಲು ಕ್ರಮಕೈಗೊಳ್ಳುವಂತೇ ಒತ್ತಾಯಿಸಲಾಯಿತು.

ನಂತರ ಜಿಲ್ಲಾಧಿಕಾರಿಗಳ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.