ಡಿಜಿ ಮತ್ತು ಐಜಿ ನಿವೃತ್ತ ಐಪಿಎಸ್ ಅಧಿಕಾರಿ ಓಂ ಪ್ರಕಾಶ್ ಕೊಲೆ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನಿವೃತ್ತ ಅಧಿಕಾರಿ ಓಂ ಪ್ರಕಾಶ್ ಕೊಲೆಯಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಪತ್ನಿ ಪಲ್ಲವಿ ಅವರೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
68 ವರ್ಷದ ಓಂ ಪ್ರಕಾಶ್ ಅವರು ನಿವೃತ್ತಿಯ ಬಳಿಕ ಬೆಂಗಳೂರಿನ ಮನೆಯಲ್ಲಿ ವಾಸವಾಗಿದ್ದರು. ಪತ್ನಿಯ ಜತೆ ಮನಸ್ಥಾಪವಿತ್ತು. ಮಾನಸಿಕ ಸ್ಥಿಮಿತತೆ ಕಳೆದುಕೊಂಡ ಪತ್ನಿ ಭಾನುವಾರ ಸಂಜೆ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಘಟನೆಯ ಕುರಿತು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಪೋಸ್ಟ್‌ಮಾಟಂಗೆಂದು ಹೊಸೂರು ರಸ್ತೆಯ ಸೆಂಟ್‌ಜಾನ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಡಿಜಿ & ಡಿಐಜಿ ಓಂ ಪ್ರಕಾಶ್ ಅವರು 1981ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದರು. ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು. 2015 ರಲ್ಲಿ ಪೊಲೀಸ್ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಿದ್ದರು.
Leave a Comment