*"ಸುಮಾರು 14ಕೋಟಿ ವೆಚ್ಚದಲ್ಲಿ ತಂದೆ-ತಾಯಿ ಹೆಸರಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ"*
ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ ಅಭಿವೃದ್ದಿಪಡಿಸಿರುವ "ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ" ಯ ನೂತನ ಕಟ್ಟಡದ ಉದ್ಘಾಟನಾ
ಸಮಾರಂಭದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಭಾಗವಹಿಸಿ,
ಪರಮಪೂಜ್ಯ ಶ್ರೀಗಳಾದ ಶ್ರೀಶ್ರೀಶ್ರೀ ನಿರ್ಮಲಾನಂದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ, ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರೊಂದಿಗೆ ಜ್ಯೋತಿ ಬೆಳಗಿಸುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸನ್ಮಾನ್ಯ ಡಾII ಹೆಚ್.ಎಂ ವೆಂಕಟಪ್ಪ ಅವರ ನಿಸ್ವಾರ್ಥ ಸೇವೆ ಹಾಗೂ ದೂರದೃಷ್ಟಿ ಕಲ್ಪನೆ ಇಂದು ನಮಗೆಲ್ಲ ಮಾದರಿಯಾಗಿದೆ. ತಮ್ಮ ಗ್ರಾಮದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ವಿದ್ಯಾವಂತರಾಗಿ ತಮ್ಮ ಬದುಕನ್ನ ರೂಪಿಸಿಕೊಳ್ಳಬೇಕೆಂಬ ಸದುದ್ದೇಶದಿಂದ 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಂಗಲೂರು ಗ್ರಾಮದ ಶಾಲೆಗೆ ಹೊಸರೂಪ ಕಲ್ಪಿಸಿದ್ದಾರೆ. ಅವರ ಈ ಕಾರ್ಯಕ್ಕೆ ಹೃದಯಪೂರ್ವಕ ಅಭಿನಂದನೆಗಳು. ಹೃದಯ ಶ್ರೀಮಂತರಾದ ಡಾII ಹೆಚ್.ಎಂ ವೆಂಕಟಪ್ಪ ಅವರಿಗೆ ಇನ್ನಷ್ಟು ಸಮಾಜಮುಖಿ ಕೆಲಸ ಮಾಡಲು ಭಗವಂತ ಆಯುರಾರೋಗ್ಯ ನೀಡಲಿ ಎಂದು ಶುಭಹಾರೈಸಿದರು
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸಭಾಪತಿಗಳಾದ ಶ್ರೀ ಬಸವರಾಜ ಹೊರಟ್ಟಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ.ಪಿ ಯೋಗೇಶ್ವರ್, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್. ರವಿ, ಶ್ರೀ ಪುಟ್ಟಣ್ಣ, ಸಂಸದರಾದ ಶ್ರೀ ಸಿ.ಎನ್ ಮಂಜುನಾಥ್ ಸೇರಿದಂತೆ ಅನೇಕ ಗಣ್ಯರು, ಮುಖಂಡರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಕಣ್ವ ಫೌಂಡೇಶನ್ ನ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮುದ್ದು ಮಕ್ಕಳು ಹಾಜರಿದ್ದರು.
Leave a Comment