*"ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ"*:ನೂತನ_ಬಾಲಕಿಯರ_ಪ್ರೌಢಶಾಲಾ_ಪ್ರಾರಂಭೋತ್ಸವ
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ "ಸರ್ಕಾರಿ ಬಾಲಕಿಯರ ಪ್ರೌಢಶಾಲೆ" ಹಾಗೂ "ಪದವಿ ಪೂರ್ವ ಕಾಲೇಜಿನ ಕೊಠಡಿ" ಗಳನ್ನು ಉದ್ಘಾಟಿಸಿ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದೆನು.
ನಮ್ಮ ರಾಜ್ಯ ಸರ್ಕಾರ ಹೆಣ್ಣುಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಹೆಣ್ಣುಮಕ್ಕಳಿಗೆ ಸಮಾಜದಲ್ಲಿ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಹಾಗೂ ಅವರಿಗೆ ಶಿಕ್ಷಣದ ಅಗತ್ಯತೆ ಮತ್ತು ಅನಿವಾರ್ಯತೆಯನ್ನು ತಿಳಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಈಗಾಗಲೇ ನಮ್ಮ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದೆ. ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಲು ಪೋಷಕರು ಪ್ರತಿದಿನ ತಪ್ಪದೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು ಶಿಕ್ಷಣದಿಂದಲೇ ಅವರ ಭವಿಷ್ಯ ಉಜ್ವಲವಾಗುವುದು ಎಂದು ತಿಳಿಸಿದೆನು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಸವರಾಜ ರಾಯರೆಡ್ಡಿ ಅವರು ಹಾಗೂ ಮಾಜಿ ಶಾಸಕರಾದ ಶ್ರೀ ಅಮರೇಗೌಡ ಬಯ್ಯಾಪುರ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು, ಶಾಲಾ ಸಿಬ್ಬಂದಿ ವರ್ಗದವರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು ಹಾಜರಿದ್ದರು.
Leave a Comment