ನೂತನವಾಗಿ ನಿರ್ಮಿಸಿರುವ ಪ್ರಯೋಗಾಲಯ ಹಾಗೂ ಹೆಚ್ಚುವರಿ ಕಟ್ಟಡಗಳನ್ನು ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್,  ಮಧು ಬಂಗಾರಪ್ಪನವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಶ್ರೀ ರಂಗನಾಥ ಪಿ.ಯು ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಿರುವ ಪ್ರಯೋಗಾಲಯ ಹಾಗೂ ಹೆಚ್ಚುವರಿ ಕಟ್ಟಡಗಳನ್ನು ಉದ್ಘಾಟಿಸಿಸಿದರು,.

ನಮ್ಮ ಸರ್ಕಾರ ರಾಜ್ಯ ಸರ್ಕಾರಿ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೆ CET, NEET ಮತ್ತು JEE ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು "ವಿದ್ಯಾ ವಿಜೇತ" ಕಾರ್ಯಕ್ರಮವನ್ನು ಜಾರಿ ತಂದಿದೆ. ನಾವು ಯಾವುದೇ ಜಾತಿ, ಮತ, ಧರ್ಮಗಳ ಆಧಾರದ ಮೇಲೆ ಶಿಕ್ಷಣ ನೀಡದೇ ನಮ್ಮ ಮಕ್ಕಳು ದೇಶದ ಭವಿಷ್ಯವಾಗಿ ರೂಪುಗೊಳ್ಳಬೇಕು ಎಂಬ ಧ್ಯೇಯದಿಂದ ಕಾರ್ಯ ನಿರ್ವಹಿಸುತ್ತಿದ್ದೇವೆ. ಮಕ್ಕಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡುವ ಮೂಲಕ ದೇಶ ಹಾಗೂ ರಾಜ್ಯವನ್ನು ಮುನ್ನಡೆಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.
ಬಳಿಕ ಪ್ರಸಕ್ತ ಸಾಲಿನಲ್ಲಿ ವಿಶೇಷ ಅಂಕಗಳಿಸುವ ಮೂಲಕ ಸಾಧನೆ ಮಾಡಿದ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವರಾದ ಶ್ರೀ ಡಿ.ಸುಧಾಕರ್, ಸಂಸ್ಥೆಯ ಕಾರ್ಯದರ್ಶಿ ಶ್ರೀ ಟಿ. ವೀರಕರಿಯಪ್ಪ ಸೇರಿದಂತೆ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.