ಆಹಾರ ಮತ್ತು ಪೌಷ್ಟಿಕತೆ — ಆರೋಗ್ಯಕರ ಜೀವನದ ಕೀಲಿಕೈ
ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಅಂತಿಮ ವರ್ಷದ ಬಿ.ಎಸ್ಸಿ (ಹಾನರ್ಸ್) ಕೃಷಿ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಆಹಾರ ಮತ್ತು ಪೌಷ್ಟಿಕಾಂಶದ ಮಹತ್ವ ಎಂಬ ಶೀರ್ಷಿಕೆಯ ಅಡಿಯಲ್ಲಿ ಗುಂಪು ಚರ್ಚೆ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಈ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (KPS) ಹಿತ್ತಲ ಇಲ್ಲಿ ಸ್ವಚ್ಛತೆ, ಬೆಳಗಿನ ಉಪಹಾರದ ಮತ್ತು ಸಮತೋಲನ ಆಹಾರದ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದ ಉದ್ದೇಶ ಮಕ್ಕಳಲ್ಲಿ ಆರೋಗ್ಯಕರ ಜೀವನಶೈಲಿಯ ಬಗ್ಗೆ ಅರಿವು ಮೂಡಿಸುವುದಾಗಿತ್ತು.
ಶಾಲೆಯ ಪ್ರಾಂಶುಪಾಲರಾದ ವೀರಣ್ಣಗೌಡ ಸರ್ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದರು. ಕಾರ್ಯಕ್ರಮದ ಮುಖ್ಯಾಂಶಗಳೆಂದರೆ “ದಿನವನ್ನು ಉತ್ತಮವಾಗಿ ಪ್ರಾರಂಭಿಸಲು ಬೆಳಗಿನ ಉಪಹಾರ ಅತ್ಯಗತ್ಯ. ಉಪಹಾರ ತಿನ್ನದಿದ್ದರೆ ದೇಹಕ್ಕೆ ಶಕ್ತಿ ಕಡಿಮೆ ಆಗುತ್ತದೆ ಮತ್ತು ಓದುವ ಸಾಮರ್ಥ್ಯ ಕುಸಿಯುತ್ತದೆ. ಸ್ವಚ್ಛತೆ ಕಾಪಾಡುವುದು ಹಾಗೂ ಕೈ ತೊಳೆಯುವ ಅಭ್ಯಾಸವು ರೋಗಗಳಿಂದ ರಕ್ಷಣೆ ನೀಡುತ್ತದೆ. ಹಣ್ಣು,ತರಕಾರಿ,ಧಾನ್ಯಗಳನ್ನು ಒಳಗೊಂಡ ಸಮತೋಲನ ಆಹಾರವನ್ನು ಸೇವಿಸಬೇಕು ಎಂದು ವಿಧ್ಯಾರ್ಥಿಗಳು ಮಕ್ಕಳಿಗೆ ತಿಳಿಸಿಕೊಟ್ಟರು.
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಆಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮಕ್ಕಳು ಖುಷಿಯಿಂದ ಆಟಗಳನ್ನು ಆಡಿ ಸಂತೋಷಪಟ್ಟರು.ಈ ಜಾಗೃತಿ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆರೋಗ್ಯದ ಮಹತ್ವದ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.

Leave a Comment