ಡಿಜಿಪಿ ರಾಮಚಂದ್ರ ರಾವ್ ಯೂನಿಫಾರಂನಲ್ಲಿ ಕಚೇರಿಯಲ್ಲೇ ರಾಸಲೀಲೆ!! ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್..

ಬೆಂಗಳೂರು : ಡಿಜಿಪಿ ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರ ರಾಸಲೀಲೆ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗಂಭೀರ ಚರ್ಚೆಗೆ ಗ್ರಾಸವಾಗಿದೆ. 
ಈ ವಿಡಿಯೋದಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರು ಕೆಲವು ಮಹಿಳೆಯರೊಂದಿಗೆ ಕಚೇರಿಯಲ್ಲೇ ಖಾಕಿ ಯೂನಿಫಾರಂನಲ್ಲೇ ಅಸಭ್ಯವಾಗಿ ವರ್ತಿಸುತ್ತಿರುವುದು ಮತ್ತು ಮುತ್ತು ನೀಡುತ್ತಿರುವ ದೃಶ್ಯಗಳಿವೆ. 


ಕೆಲವು ಮೂಲಗಳ ಪ್ರಕಾರ, ಈರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.

 ಘಟನೆ ಕಚೇರಿ, ಸಾರ್ವಜನಿಕ ಸ್ಥಳದಲ್ಲೇ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಇದು ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದೇ ವೇಳೆ, ಇತ್ತೀಚೆಗಷ್ಟೇ ರಾಮಚಂದ್ರ ರಾವ್ ಅವರ ಪುತ್ರಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದರು. ಕುಟುಂಬದ ಸದಸ್ಯರ ವಿರುದ್ಧ ಸರಣಿ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಈ ಹೊಸ ವಿಡಿಯೋ ವೈರಲ್ ಆಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. 

ಆದರೆ, ಈ ವಿಡಿಯೋ ಸಂಬಂಧ ಇದುವರೆಗೂ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ .

ಈ ಬಗ್ಗೆ ವರಧಿ ನೀಡಲು ಸಿಎಂ ಸೂಚನೆ:

ಕಚೇರಿಯಲ್ಲೇ ಡಿಜಿಪಿ ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್​​ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದು,
ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು, ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.