ಮೇ 3ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ 2ನೇ ವಾರ್ಷಿಕೋತ್ಸವ ಸಮಾರಂಭ: -ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ-ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ
ಮೇ 3ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ
ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ 2ನೇ ವಾರ್ಷಿಕೋತ್ಸವ
ಪತ್ರಿಕಾ ದಿನಾಚರಣೆ-ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ-ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮಶಿವಮೊಗ್ಗ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ೨ನೇ ವಾರ್ಷಿಕೋತ್ಸವ ಮತ್ತು ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ: ೦೩-೦೫-೨೦೨೬ನೇ ಭಾನುವಾರ ಬೆಳಿಗ್ಗೆ ೧೦.೩೦ ಗಂಟೆಗೆ ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಡೈಸ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಜಿ.ನಾಗರಾಜ (ರಾಜು) ತಿಳಿಸಿದರು.ಅವರು ಇಂದು ಸಂಘದ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಾರ್ಷಿಕೋತ್ಸವದ ಅಂಗವಾಗಿ ೨೦೨೫-೨೬ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಂದರೆ ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಓದಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ಸದಸ್ಯರ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮಾನ ಮನಸ್ಕ ಅತ್ಯುತ್ತಮ ವರದಿ ಮಾಡುತ್ತಿರುವ ಪತ್ರಕರ್ತರಿಗೆ ಹಾಗೂ ಸಂಪಾದಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪತ್ರಿಕಾ ವಿತರಕರ ಸಂಘದ ಮುಖ್ಯಸ್ಥರಿಗೆ, ಪತ್ರಿಕಾ ವಲಯದ ಪ್ರಿಂರ‍್ಸ್ಗೆ ಹಾಗೂ ಡಿಟಿಪಿ ಆಪರೇಟರ್‌ಗಳಿಗೆ ಹಾಗೂ ಗಣ್ಯರಿಗೆ ಸನ್ಮಾನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ೨೦೨೫-೨೬ನೇ ಸಾಲಿನಲ್ಲಿ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಹಿರಿಯ ಪತ್ರಕರ್ತರಾದ ಸಿ.ವಿ. ರಾಘವೇಂದ್ರರಾವ್, ಕಾಮ್ರೇಡ್ ಲಿಂಗಪ್ಪ ಮತ್ತು ಪತ್ರಿಕಾ ಛಾಯಾಗ್ರಾಹಕ ಶಿವಮೊಗ್ಗ ನಂದನ್, ಪಬ್ಲಿಕ್ ಟಿ.ವಿ. ವರದಿಗಾರ ಶಶಿಧರ, ಬಿ-ಟಿ.ವಿ. ವರದಿಗಾರ ಅನಿಲ್, ಸಾಗರದ ಪತ್ರಕರ್ತ ಓಂಕಾರ್ ತಾಳಗುಪ್ಪ ಇವರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಮಾಧ್ಯಮ ಸಲಹೆಗಾರರಾದ ಜಗಳೂರು ಲಕ್ಷö್ಮಣರಾವ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.), ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಜಿ. ನಾಗರಾಜ (ರಾಜು) ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಇನ್ನಿತರೆ ಗಣ್ಯರೂ ಸಹ ಉಪಸ್ಥಿತರಿರುವರು ಎಂದು ತಿಳಿಸಿದರು.

ಮೀಡಿಯಾ, ನಾನ್ ಮೀಡಿಯಾ ಪತ್ರಕರ್ತರು, ವಿವಿಧ ಪತ್ರಿಕಾ ಸಂಘಟನೆಯ ಪತ್ರಕರ್ತರು ಎಂಬ ತಾರತಮ್ಯವಿಲ್ಲದೇ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸಮಾನ ಮನಸ್ಕ ಪತ್ರಕರ್ತರಿಗೆ ಮತ್ತು ವಿವಿಧ ಗಣ್ಯರಿಗೆ, ವಿವಿಧ ಸಂಘಟನೆಯ ಮುಖಂಡರಿಗೆ ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಆಹ್ವಾನಿಸಲಾಗಿದೆ. ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕಾಗಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಚಿತ್ರಪ್ಪ ಯರಬಾಳ, ಪ್ರಧಾನ ಕಾರ್ಯದರ್ಶಿ ಕೆ.ಎಂ.ಸತೀಶ್ ಗೌಡ, ಖಜಾಂಚಿ ಬಿ.ಸಿ.ಗಿರೀಶ್, ಪದಾಧಿಕಾರಿಗಳಾದ ಬಿ.ಸಿ.ಶಿವರಾಜ್, ಎಂ.ಅಣ್ಣಪ್ಪ, ಕಾನೂನು ಸಲಹೆಗಾರರಾದ ಷಡಾಕ್ಷರಪ್ಪ ಜಿ.ಆರ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment