ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ವಕೀಲರ ಸಂಘದ ನೇತೃತ್ವದಲ್ಲಿ ಬೃಹತ್ ಕಾಲ್ನಡಿಗೆಯಲ್ಲಿ ಜಾಥಾ

ಶಿವಮೊಗ್ಗ: ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಇಂದು ಬೆಳಿಗ್ಗೆ ಬೃಹತ್ ಜಾಥಾವನ್ನು ಏರ್ಪಡಿಸಲಾಗಿತ್ತು.

ಸಂಚಾರಿ ಪೀಠ ಹೋರಾಟ ಸಮಿತಿಯ 
ಗೌರವಾಧ್ಯಕ್ಷ ಕೆ.ಬಸಪ್ಪ ಗೌಡ ಮತ್ತು ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ ಇವರ ನೇತೃತ್ವದಲ್ಲಿ  ಜಿಲ್ಲಾ ನ್ಯಾಯಾಲಯ ಆವರಣದಿಂದ ನಗರದ ಪ್ರಮುಖ 
ಬೀದಿಗಳಲ್ಲಿ ಬೃಹತ್ ಜಾಥಾ ಹೊರಟು ನಗರದ ಪ್ರಮುಖ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ, ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳು ಶಿವಮೊಗ್ಗ ರವರಿಗೆ ಮನವಿ ನೀಡಲಾಯಿತು.
.
 ಈ ಸಂದರ್ಭದಲ್ಲಿ ಸಂಚಾರಿ ಪೀಠ ಹೋರಾಟ ಸಮಿತಿಯ 
ಗೌರವಾಧ್ಯಕ್ಷ ಕೆ.ಬಸಪ್ಪ ಗೌಡ ಮತ್ತು ಶಿವಮೊಗ್ಗ ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ ಸ್ವಾಮಿ ಮಾತನಾಡುತ್ತಾ, ಕಳೆದ ೧೧ ದಿನಗಳಿಂದ ಜಿಲ್ಲಾ ವಕೀಲರ ಸಂಘ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗಾಗಿ ಧರಣಿ ಸತ್ಯಾಗ್ರಹ ನಡೆಸುತ್ತ ಬಂದಿದ್ದು, ಈಗಾಗಲೇ ನಗರದ ವಿವಿಧ ಸಂಘಟನೆಗಳು, ಮಠಾಧೀಶರು 
ಸಕ್ರಿಯವಾಗಿ ಇದರಲ್ಲಿ ಪಾಲ್ಗೊಂಡು ಸಂಪೂರ್ಣ ಬೆಂಬಲ ಸೂಚಿಸುತ್ತ ಬಂದಿದ್ದಾರೆ ಎಂದರು.

 ಈ ಹೋರಾಟ ಇನ್ನಷ್ಟು ಪರಿಣಾಮಕಾರಿಯಾಗಿ ರಾಜ್ಯ ಸರ್ಕಾರ, ಹೈಕೋರ್ಟ ಮುಖ್ಯ ನ್ಯಾಯಾಧೀರಶರನ್ನು ತಲುಪಲು ಈ ಬೃಹತ್ ಕಾಲ್ನಡಿಗೆ ಜಾಥಾ ಸಂಘಟಿಸಲಾಗಿದೆ ಎಂದರು.

ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಎಲ್ಲ ರೀತಿಯಿಂದ ಸೌಲಭ್ಯಗಳನ್ನು ಹೊಂದಿರುವ ಮಧ್ಯ ಕರ್ನಾಟಕದ ಶಿವಮೊಗ್ಗ ಜಿಲ್ಲಾ ಕೇಂದ್ರದಲ್ಲಿ ಹೆಚ್ಚು ಸಂಖ್ಯೆಯಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ,ವಕೀಲರ ಸಂಖ್ಯೆ, ಕಕ್ಷೀದಾರರ ಸಂಖ್ಯೆ ಗಮನಿಸಿದರೆ ಪೀಠ ಸ್ಥಾಪನೆಗೆ ಮಂಗಳೂರಿಗಿಂತ ಶಿವಮೊಗ್ಗವೇ ಪ್ರಶಸ್ತ ಸ್ಥಳವಾಗಿದೆ    ಎಂದು ತಿಳಿಸಿದರು.
 ಒಂದು ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಲು 
ನಾಲ್ಕು ನ್ಯಾಯಾಧೀಶರಿಗೆ ಪ್ರತಿ ನಿತ್ಯ ಕಾರ್ಯ ನಿರ್ವಹಿಸಲು ಬೇಕಾದಷ್ಟು ಪ್ರಕರಣಗಳು ಇರಬೇಕು. ಕನಿಷ್ಟ 4-5 ಜಿಲ್ಲೆಗಳನ್ನೊಳಗೊಂಡಿರಬೇಕು ಎಂಬುದೂ ಸೇರಿದಂತೆ ನ್ಯಾ.ಮೂ.ಜಸ್ವಂತ್ ಸಿಂಗ್ ವರದಿಯಲ್ಲಿ ಮೂರ್ನಾಲ್ಕು 
ಸೂತ್ರಗಳನ್ನು, ಮಾನದಂಡಗಳನ್ನು ಹೇಳಲಾಗಿದೆ ಎಂದರು.

 ಆ ವರದಿಯ ಪರೀಕ್ಷೆಯಲ್ಲಿ ಯಾರು ಉತ್ತೀರ್ಣರಾಗುತ್ತಾರೋ ಆ ಭಾಗದಲ್ಲಿ ಪೀಠ ಸ್ಥಾಪನೆಗೆ ತಮ್ಮ ಅಭ್ಯಂತರವಿಲ್ಲ ಎಂದರು. 
ಸಾಮಾನ್ಯವಾಗಿ ರಾಜ್ಯಕ್ಕೆ ಎರಡೇ ನ್ಯಾಯ ಪೀಠ ಕೊಡಬೇಕೆಂದಿದೆ. ಸಂಚಾರಿ ಪೀಠದ ಸ್ಥಾಪನೆಯಲ್ಲಿ ಕೇಂದ್ರ ಸರ್ಕಾರದ ಪಾತ್ರ ಏನೂ ಇಲ್ಲ. ಆದರೆ ನೆರೆಯ ಮಹಾರಾಷ್ಟçದಲ್ಲಿ ಮೂರು ಸಂಚಾರಿ ಪೀಠಗಳನ್ನು ಸ್ಥಾಪಿಸಲಾಗಿದೆ. ಜನರಿಗೆ ಹತ್ತಿರವಾಗುವಂತೆ ನ್ಯಾಯಾಲಯ ಸ್ಥಾಪನೆ ಅಗತ್ಯ ಮನಗಂಡು 2008ರಲ್ಲಿ 
ಧಾರವಾಡಕ್ಕೆ ಒಂದು ನ್ಯಾಯ ಪೀಠ ಮಂಜೂರು ಮಾಡಲಾಯಿತು. ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಮಂತ್ರಿಗಳಾಗಿದ್ದರ ಪರಿಣಾಮ ಅವರ ಪ್ರಭಾವದಿಂದ ಕಲ್ಯಾಣ 
ಕರ್ನಾಟಕ್ಕೆ ಅನುಕೂಲವಾಗಲೆಂದು ಕಲಬುರ್ಗಿಯಲ್ಲಿ ಇನ್ನೊಂದು ನ್ಯಾಯ ಪೀಠ ಸ್ಥಾಪನೆಯಾಯಿತು ಎಂದು ತಿಳಿಸಿದರು.

ಮಂಗಳೂರಿನಲ್ಲಿ ಪೀಠ ಸ್ಥಾಪನೆ ಪ್ರಸ್ತಾಪದ ಸಂದರ್ಭದಲ್ಲಿ ಶಿವಮೊಗ್ಗದವರ ಅಭಿಪ್ರಾಯವನ್ನು ಕೇಳಲೇ ಇಲ್ಲ. ಅಲ್ಲಿನ ರಾಜಕೀಯ ಪ್ರಭಾವದಿಂದಾಗಿ ಮುಖ್ಯಮಂತ್ರಿಗಳು ಮಂಗಳೂರಿನಲ್ಲಿ ಪೀಠ ಸ್ಥಾಪನೆಗೆ ಶಿಪಾರಸು ಶಿವಮೊಗ್ಗವನ್ನೂ 
ಅದರಲ್ಲಿ ಸೇರಿಸಿದ್ದಾರೆ. ಒಂದು ವೇಳೆ ಶಿವಮೊಗ್ಗವನ್ನು ಅಲ್ಲಿಂದ ಕೈಬಿಟ್ಟರೆ ಕೇವಲ ಉಡುಪಿ ಮತ್ತು ದಕ್ಷಿಣ ಕನ್ನಡ ಈ ಎರಡೇ ಜಿಲ್ಲೆಗಳಿಗೆ ಸಂಚಾರಿ ಪೀಠ ಸ್ಥಾಪನೆಯಾದಂತಾಗುತ್ತದೆ. ಹೀಗಾದರೆ ರಾಜ್ಯದಲ್ಲಿ 15 ಸಂಚಾರಿ ಪೀಠ ಸ್ಥಾಪಿಸಬೇಕಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

 ಬಹಳ ತಡವಾಗಿ ಈ ವಿಚಾರ ತಮಗೆ ತಿಳಿಯಿತು. ಪೀಠ ಸ್ಥಾಪನೆಗೂ ಮುನ್ನ ಸಾರ್ವಜನಿಕರ ಅಹವಾಲು 
ಸ್ವೀಕರಿಸಬೆಕು ಎಂದು ಅವರು ಆಗ್ರಹಿಸಿದರು

ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಮುಂದಿನ ವಾರ ಅವರನ್ನು ಭೇಟಿ ಮಾಡಿ ವಿಷಯ ಮನವರಿಕೆ ಮಾಡಿಕೊಡುತ್ತೇವೆ. ಅವರು ನಮಗೆ ಬೆಂಬಲ ನೀಡುತ್ತಾರೆಂಬ ವಿಶ್ವಾಸವಿದೆ ಎಂದರು.

ಬೃಹತ್ ಜಾಥಾದಲ್ಲಿ ಶಿವಮೊಗ್ಗ ವಕೀಲರ ಸಂಘ ಸೇರಿದಂತೆ  ವಿವಿಧ ಸಂಘಟನೆಗಳ ಮುಖಂಡರು, ರೈತ ಸಂಘ, ನಾಗರೀಕ ಹಿತತಕ್ಷಣಾ ವೇದಿಕೆ ಮತ್ತಿತರ ಸಂಘಟನೆಯ ಮುಖಂಡರು ತಮ್ಮ ತಮ್ಮ ಬ್ಯಾನರ ಹಿಡಿದು ಘೋಷಣೆ ಕೂಗುತ್ತಾ ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.