ಪ. ಜಾತಿ ಮತ್ತು ಪ. ಪಂಗಡದ ನಿರುದ್ಯೋಗಿ ಪದವೀಧರರಿಗೆ ಎಲೆಕ್ಟ್ರಾನಿಕ್ಸ್-ಡಿಜಿಟಲ್ ಉದ್ದಿಮೆ ಸ್ಥಾಪಿಸಲು ಧನಸಹಾಯ
ಶಿವಮೊಗ್ಗ : ಪದವಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರು ಮಹಾನಗರ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸ್ವಂತ ಉದ್ಯಮ ಘಟಕವನ್ನು ಸ್ಥಾಪಿಸಲು ಇಚ್ಚಿಸುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಘಟಕದ ವೆಚ್ಚದ ಶೇ.70 ರಷ್ಟು ಅಥವಾ ಗರಿಷ್ಠ ರೂ. 5 ಲಕ್ಷದವರೆಗೆ ಸಹಾಯಧನವನ್ನು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ
ಮಂಜೂರು ಮಾಡಲಾಗುತ್ತದೆ.
ಆಸಕ್ತರು ಕಚೇರಿಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ಶಿವಮೊಗ್ಗದ ವಿನೋಬನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು ಸಲ್ಲಿಸಲು ಜುಲೈ 15 ರಿಂದ ಜುಲೈ 31ರವರೆಗೆ ಅವಕಾಶ ನೀಡಲಾಗಿದೆ. ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಡಿ.ಮಲ್ಲೇಶಪ್ಪ ತಿಳಿಸಿದ್ದಾರೆ.

Leave a Comment