​ಮದುವೆ ಆಮಿಷ ಒಡ್ಡಿ ಯುವತಿಗೆ ನಂಬಿಸಿ ವಂಚನೆ:ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು


ಶಿವಮೊಗ್ಗದಲ್ಲಿ ಹೊರರಾಜ್ಯದ ಯುವತಿ ಮೇಲೆ ಅತ್ಯಾಚಾರ, ಆರೋಪಿ ಪರಾರಿ

​ಶಿವಮೊಗ್ಗ : 
ಮದುವೆಯಾಗುವುದಾಗಿ ನಂಬಿಸಿ ಹೊರರಾಜ್ಯದ ಯುವತಿಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಕೈಕೊಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಈ ಕೃತ್ಯ ಎಸಗಿದವ ನಗರದ ನಿವಾಸಿ ಶ್ರೀನಿಧಿ ಎಂಬಾತನ ವಿರುದ್ಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
​ಘಟನೆಯ ಹಿನ್ನೆಲೆ:

​ಆರೋಪಿ ಶ್ರೀನಿಧಿ ಹೊರರಾಜ್ಯದ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿದ್ದಾನೆ. ಪ್ರೀತಿಯ ಹೆಸರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇತ್ತೀಚೆಗೆ ಯುವತಿ ಗರ್ಭಿಣಿಯಾಗಿರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಶ್ರೀನಿಧಿ ಆಕೆಯನ್ನು ಮದುವೆಯಾಗಲು ನಿರಾಕರಿಸಿ, ಕೈಕೊಟ್ಟಿದ್ದಾನೆ.
​ತಾನು ವಂಚನೆಗೆ ಒಳಗಾಗಿರುವುದನ್ನು ಅರಿತ ನೊಂದ ಯುವತಿ ತಕ್ಷಣ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ. ಯುವತಿಯ ದೂರಿನನ್ವಯ ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

​ಸ್ಥಳ ಮಹಜರು ನಡೆಸಿದ ಪೊಲೀಸರು:

​ಪ್ರಕರಣ ದಾಖಲಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಮಹಿಳಾ ಠಾಣೆಯ ಪೊಲೀಸರು, ಶಿವಮೊಗ್ಗ ನಗರದ ದುರ್ಗಿಗುಡಿಯಲ್ಲಿರುವ 'ಶ್ರೀ ಅನುರಾಧ ಕ್ರಿಯೇಷನ್' ಅಂಗಡಿಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದಾರೆ. ಈ ಅಂಗಡಿಯಲ್ಲೇ ಅತ್ಯಾಚಾರ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.
ಪೊಲೀಸರು ಕೇಸ್ ದಾಖಲಿಸಿಕೊಳ್ಳುತ್ತಿದ್ದಂತೆ ಆರೋಪಿ ಶ್ರೀನಿಧಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.