*ಗುರುಪೂರ್ಣಿಮೆ – ಶ್ರೀ ಗುರುಗಳ ಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನ !*
*ಗುರುಕೃಪಾ ಹಿ ಕೇವಲಂ ಶಿಷ್ಯಪರಮಮಂಗಲಂ ।*
ಗುರುಪೂರ್ಣಿಮೆ (ವ್ಯಾಸ ಪೂರ್ಣಿಮೆ) ಅಂದರೆ ಶಿಷ್ಯನೋರ್ವನ ಜೀವನದಲ್ಲಿ ಬರುವಂತಹ ಮಹತ್ವದ ದಿನ. ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಅವನಿಂದ ಆವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಮತ್ತು ಕಠಿಣ ಸಮಯದಲ್ಲಿ ಅವನಿಗೆ ಅತ್ಯಂತ ಹತ್ತಿರದಿಂದ ಹಾಗೂ ನಿರಪೇಕ್ಷ ಪ್ರೇಮದಿಂದ ಆಧಾರವನ್ನು ನೀಡಿ ಸಂಕಟಮುಕ್ತ ಮಾಡುವವರು ಗುರುಗಳೇ. ಇಂತಹ ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತಪಡಿಸುವ ದಿನವೆಂದರೆ ಗುರುಪೂರ್ಣಿಮೆ. 29 ಜುಲೈ, 2026, ಬುಧವಾರದಂದು ನಾವೆಲ್ಲರೂ ಕೃತಜ್ಞರಾಗಿ ಗುರುಪೂರ್ಣಿಮೆಯನ್ನು ಆಚರಿಸಲಿದ್ದೇವೆ.
ಗುರು ಎಂದರೆ ಈಶ್ವರನ ಸಗುಣ ರೂಪ. ವರ್ಷಾದ್ಯಂತ ಪ್ರತಿಯೊಬ್ಬ ಗುರುಗಳು ತಮ್ಮ ಭಕ್ತರಿಗೆ ಅಧ್ಯಾತ್ಮದ ಬೋಧಾಮೃತವನ್ನು ನೀಡುತ್ತಿರುತ್ತಾರೆ. ಇಂತಹ ಮಹಾನ್ ಗುರುಗಳ ಋಣವನ್ನು ತೀರಿಸುವುದು ಅಸಾಧ್ಯ. ಆದರೂ ಆ ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವುದೇ ಗುರುಪೂರ್ಣಿಮೆ ಆಚರಿಸುವುದರ ಹಿಂದಿನ ಉದ್ದೇಶವಾಗಿದೆ.
ದೇವರು ಮಾನವನಿಗೆ ಎಲ್ಲ ರೀತಿಯ ಭಾವಗಳನ್ನು ಕರುಣಿಸಿದ್ದಾರೆ, ಸಮಾಧಾನ (ಶಾಂತಿ ಅಥವಾ ಆನಂದ) ಒಂದನ್ನು ಬಿಟ್ಟು. ಅದನ್ನು ಗುರುಗಳೇ ನೀಡಬಲ್ಲರು…
*ಗುರುಪೂರ್ಣಿಮೆಯ ಮಹತ್ವ*
ಗುರು-ಶಿಷ್ಯ ಪರಂಪರೆಯು ಹಿಂದೂಗಳ ಲಕ್ಷಾವಧಿ ವರ್ಷಗಳ ಚೈತನ್ಯಮಯ ಸಂಸ್ಕೃತಿಯಾಗಿದೆ. ಆದರೆ ಕಾಲದ ಪ್ರವಾಹದಲ್ಲಿ ಮಹಾನ ಗುರು-ಶಿಷ್ಯ ಪರಂಪರೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಗುರುಪೂರ್ಣಿಮೆಯ ನಿಮಿತ್ತ ಗುರುಪೂಜೆಯಾಗುತ್ತದೆ, ಹಾಗೆಯೇ ಗುರು-ಶಿಷ್ಯ ಪರಂಪರೆಯ ಶ್ರೇಷ್ಠತೆಯನ್ನು ಸಮಾಜಕ್ಕೆ ತಿಳಿಸಲು ಸಾಧ್ಯವಾಗುತ್ತದೆ. ಸ್ವಲ್ಪದರಲ್ಲಿ ಹೇಳುವುದಾದರೆ ಗುರು-ಶಿಷ್ಯ ಪರಂಪರೆಯನ್ನು ಉಳಿಸಿಕೊಳ್ಳುವ ಸದವಕಾಶ ಲಭಿಸುತ್ತದೆ.
ಗುರುಪೂರ್ಣಿಮೆಯಂದು ಗುರುತತ್ತ್ವವು (ಈಶ್ವರೀ ತತ್ತ್ವವು) ಇತರ ದಿನಗಳ ತುಲನೆಯಲ್ಲಿ ೧ ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದ್ದರಿಂದ ಗುರುಪೂರ್ಣಿಮೆಯ ನಿಮಿತ್ತ ಮೊದಲಿನಿಂದಲೂ ಮನಃಪೂರ್ವಕ ಮಾಡಿದ ಸೇವೆ ಮತ್ತು ತ್ಯಾಗ (ಸತ್‌ಗಾಗಿ ಮಾಡಿದ ಅರ್ಪಣೆ) ಇವುಗಳ ಲಾಭವು ಇತರ ದಿನಗಳ ತುಲನೆಯಲ್ಲಿ ವ್ಯಕ್ತಿಗೆ ೧ ಸಾವಿರ ಪಟ್ಟು ಹೆಚ್ಚಾಗುತ್ತದೆ; ಆದ್ದರಿಂದ ಗುರುಪೂರ್ಣಿಮೆಯು ಈಶ್ವರೀ ಕೃಪೆಯ ಒಂದು ಅಮೂಲ್ಯ ಪರ್ವಕಾಲವೇ ಆಗಿದೆ.
*ಗುರುದಕ್ಷಿಣೆ – ತನು, ಮನ, ಧನದ ತ್ಯಾಗ*
ಗುರುಪೂರ್ಣೆಮೆ ಅಂದರೆ ಗುರುಚರಣಗಳಲ್ಲಿ ತನು, ಮನ, ಧನವನ್ನು ಅರ್ಪಿಸುವ ದಿನ. ಇವುಗಳ ತ್ಯಾಗದಿಂದ ಗುರುಗಳ ಮನಸ್ಸು ಜಯಿಸಿ ಗುರುಕೃಪೆಯನ್ನು ಸುಲಭವಾಗಿ ಗಳಿಸಬಹುದು.
(ಆಧಾರ: WWW. Sanatan.org/kannada)
ಸಂಕಲನ : ಶ್ರೀ. ವಿನೋದ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ.
ಸಂಪರ್ಕ : 9342599299

Leave a Comment