13 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಭದ್ರಾವತಿ: ನ್ಯೂಟೌನ್ ಪೊಲೀಸ್ ಠಾಣೆಯ 2010ನೇ ಸಾಲಿನ ಕಲಂ 379 ಐಪಿಸಿ ಪ್ರಕರಣದಲ್ಲಿ ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ನಿವಾಸಿ ಮಂಜುನಾಥ ಎಂಬಾತನ ವಿರುದ್ಧ ಭದ್ರಾವತಿಯ ಘನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದಾಖಲಾಗಿದ್ದ ಸಿಸಿ ನಂ.1790/2010 ಪ್ರಕರಣಕ್ಕೆ ಸಂಬಂಧಿಸಿದಂತೆ ದಸ್ತಗಿರಿ ವಾರೆಂಟ್ ಜಾರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ, ವಾರೆಂಟ್ ಆಸಾಮಿ ಮಂಜುನಾಥನನ್ನು ದಸ್ತಗಿರಿ ಮಾಡಿದೆ.
ನಂತರ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ನ್ಯೂಟೌನ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Comment