ಆಗಸ್ಟ್ 25ರ ವಿಧಾನಸೌಧ ಚಲೋ: ಶಿವಮೊಗ್ಗದಲ್ಲಿ ರೈತ ಸಂಘದಿಂದ ಪತ್ರಿಕಾಗೋಷ್ಠಿ
ಶಿವಮೊಗ್ಗ: ಬಿಡದಿ ರೈತರ ಭೂಸ್ವಾಧೀನದ ವಿರುದ್ಧದ ಹೋರಾಟವನ್ನು ಬೆಂಬಲಿಸಿ, ಸಂಯುಕ್ತ ಹೋರಾಟ–ಕರ್ನಾಟಕ ವತಿಯಿಂದ ಆಗಸ್ಟ್ 25ರಂದು ಹಮ್ಮಿಕೊಂಡಿರುವ ಬೃಹತ್ ವಿಧಾನಸೌಧ ಚಲೋ ಚಳುವಳಿಗೆ ರಾಜ್ಯಾದ್ಯಂತ ರೈತರು, ಕಾರ್ಮಿಕರು, ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಮನವಿ ಮಾಡಿದರು.
ಇಂದು ಶಿವಮೊಗ್ಗದಲ್ಲಿ ಹೆಚ್.ಆರ್. ಬಸವರಾಜಪ್ಪ ಅವರ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ರೈತರ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಆಗಸ್ಟ್ 25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರೈತರು, ಕಾರ್ಮಿಕರು, ಯುವಜನರು ಸೇರಿದಂತೆ ಊಟ ಮಾಡುವ ಪ್ರತಿಯೊಬ್ಬರೂ ಈ ಹೋರಾಟಕ್ಕೆ ಬೆಂಬಲವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಳುವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್, ಬಿಸಿ ಊಟ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಹನುಮಮ್ಮ, ಡಿಎಸ್‌ಎಸ್ (ಅಂಬೇಡ್ಕರ್‌ವಾದ) ಜಿಲ್ಲಾ ಸಂಚಾಲಕ ಶೇಷಪ್ಪ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಕೆ. ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ. ಜಗದೀಶ್ ಹಾಗೂ ಶಿವಮೊಗ್ಗ ತಾಲೂಕು ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಆಗಸ್ಟ್ 25ರ ವಿಧಾನಸೌಧ ಚಲೋಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ನೀಡುವಂತೆ ಮುಖಂಡರು ಮನವಿ ಮಾಡಿದರು.

Leave a Comment