ಬಿಜೆಪಿ ಅನಿರ್ದಿಷ್ಟಾವಧಿ ಧರಣಿಗೆ 3ನೇ ದಿನ: ಪ್ರಮುಖ ಮುಖಂಡರು, ಕಾರ್ಯಕರ್ತರು ಭಾಗಿ

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಿಜೆಪಿಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ನಿರಂತರ ಧರಣಿ ಇಂದು 3ನೇ ದಿನಕ್ಕೆ ಕಾಲಿಟ್ಟಿದೆ.

ಧರಣಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ., ವಿಭಾಗ ಪ್ರಭಾರಿ ಆರ್.ಕೆ. ಸಿದ್ದರಾಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ, ಶಿವರಾಜ್, ಮಾಲತೇಶ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ರಮೇಶ್ (ರಾಮು) ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಜಿಲ್ಲಾ ಸಮಿತಿ ಸದಸ್ಯರಾದ ಶಾಂತ ಸುರೇಂದ್ರ, ಸುರೇಖಾ ಮುರಳಿಧರ್, ತೀರ್ಥಹಳ್ಳಿ ಮಂಡಲ ಅಧ್ಯಕ್ಷ ನವೀನ್ ಹೆದ್ದೂರು, ಮೋಹನ್ ಭಟ್ರು, ರಕ್ಷಿತ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಕ್ಕೆ, ಯುವ ಮೋರ್ಚಾ ನಗರಾಧ್ಯಕ್ಷ ರಾಹುಲ್ ಬಿದರೆ ಸೇರಿದಂತೆ ಹಲವರು ಧರಣಿಯಲ್ಲಿ ಉಪಸ್ಥಿತರಿದ್ದರು.

ತೀರ್ಥಹಳ್ಳಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋದಾ ಮಂಜುನಾಥ್, ಸಂಧ್ಯಾ ರಮೇಶ್, ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಸದಸ್ಯೆ ಜ್ಯೋತಿ ಮೋಹನ್ ಹಾಗೂ ಜಿಲ್ಲಾ ಮಾಧ್ಯಮ ತಂಡದ ಚಂದ್ರಶೇಖರ್ ಎಸ್., ಮಂಜುನಾಥ್ ಎನ್. ಅವರು ಭಾಗವಹಿಸಿದ್ದರು.

ಜಿಲ್ಲಾ ಸೋಷಿಯಲ್ ಮೀಡಿಯಾ ತಂಡದ ಶರತ್ ಕಲ್ಯಾಣ್, ದಿನೇಶ್ ಆಚಾರ್ಯ ಸೇರಿದಂತೆ ತೀರ್ಥಹಳ್ಳಿ ಮಂಡಲದ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಧರಣಿ ಮುಂದುವರಿದಿದ್ದು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿದ್ದಾರೆ.

ಹಲೋ ಶಿವಮೊಗ್ಗ — ನಿಮ್ಮ ಜಿಲ್ಲೆಯ ಸುದ್ದಿ, ನಿಮ್ಮ ಧ್ವನಿ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.