ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ: ಆ.29ರಿಂದ 31ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಶಿವಮೊಗ್ಗ: ನಗರದ ದೇವಂಗಿ ರತ್ನಾಕರ ಬಡಾವಣೆ 2ನೇ ಹಂತ, ಬೊಮ್ಮನಕಟ್ಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಘವೇಂದ್ರ ತೀರ್ಥ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 29ರಿಂದ 31ರವರೆಗೆ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ.
ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ, ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಂತ್ರಾಲಯ ಶಾಖಾ ಮಠದ ವತಿಯಿಂದ ಮೂರು ದಿನಗಳ ಕಾಲ ವಿಶೇಷ ಪೂಜೆ, ಅಭಿಷೇಕ, ಪಾದಪೂಜೆ, ಕನಕಾಭಿಷೇಕ, ಮಹಾರಥೋತ್ಸವ ಹಾಗೂ ರಾಜಬೀದಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಆ.29ರಂದು ಪೂರ್ವಾರಾಧನೆ
ಆಗಸ್ಟ್ 29ರಂದು ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ, 7 ಗಂಟೆಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ, 10 ಗಂಟೆಗೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ನಡೆಯಲಿದೆ.
ಅಂದು ಸಂಜೆ 5 ಗಂಟೆಗೆ ಕುಮಾರಿ ಪ್ರಜ್ಞಾ ಹಾಗೂ ಶ್ರೀಮತಿ ರಶ್ಮಿ ರಾಘವೇಂದ್ರ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

ಆ.30ರಂದು ಮಧ್ಯಾರಾಧನೆ

ಆಗಸ್ಟ್ 30ರಂದು ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ, 7 ಗಂಟೆಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ, 10 ಗಂಟೆಗೆ ಪಾದಪೂಜೆ ಹಾಗೂ ಕನಕಾಭಿಷೇಕ ಅರ್ಚನೆ ಮತ್ತು ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಸಂಜೆ 5 ಗಂಟೆಗೆ ಶ್ರೀ ಸರಸ್ವತಿ ವಿದ್ಯಾಲಯದ ವತಿಯಿಂದ ವೀಣಾವಾದನ ಕಾರ್ಯಕ್ರಮ ಆಯೋಜಿಸಲಾಗಿದೆ.

ಆ.31ರಂದು ಉತ್ತರಾರಾಧನೆ ಹಾಗೂ ಮಹಾರಥೋತ್ಸವ

ಆಗಸ್ಟ್ 31ರಂದು ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ, 7 ಗಂಟೆಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ ನಡೆಯಲಿದೆ.

ಬೆಳಿಗ್ಗೆ 9 ಗಂಟೆಗೆ ಶ್ರೀ ಗುರುರಾಘವೇಂದ್ರ ರಾಯರ ವಿಶೇಷಾಲಂಕೃತ ರಾಜಬೀದಿ ಉತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಮಠದ ಪ್ರಾಕಾರದಲ್ಲಿ ಮಹಾರಥೋತ್ಸವ ನೆರವೇರಲಿದೆ.

ನಂತರ ಡೋಲೋತ್ಸವ, ಸ್ವಸ್ತಿವಾಚನ, ಮಹಾಮಂಗಳಾರತಿ, ನೈವೇದ್ಯ ಹಾಗೂ ತೀರ್ಥ ಪ್ರಸಾದ ಕಾರ್ಯಕ್ರಮಗಳು ನಡೆಯಲಿವೆ.

ಅಂದು ಸಂಜೆ 5 ಗಂಟೆಗೆ ಇಂಪು ಮ್ಯೂಸಿಕಲ್ ಕ್ರಿಯೆಟರ್ಸ್ ವತಿಯಿಂದ ‘ದಾಸ ವೈಭವ’ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಮೂರು ದಿನಗಳ ಆರಾಧನಾ ಮಹೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ.

ಈ ಪವಿತ್ರ ಆರಾಧನಾ ಮಹೋತ್ಸವದ ಎಲ್ಲ ಕಾರ್ಯಕ್ರಮಗಳಲ್ಲಿ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುರಾಯರ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು. ತನು-ಮನ-ಧನದೊಂದಿಗೆ ಕಾರ್ಯಕ್ರಮಗಳಿಗೆ ಸಹಕರಿಸುವಂತೆ ಮಠದ ವ್ಯವಸ್ಥಾಪಕರಾದ ಶ್ರೀ ದಿರೇಂದ್ರ ಆಚಾರ್ ಅವರು ಮನವಿ ಮಾಡಿದ್ದಾರೆ.

ಆಗಸ್ಟ್ 29ರಿಂದ 31ರವರೆಗೆ ನಡೆಯಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಭಕ್ತಾದಿಗಳಿಗೆ ಸಾದರ ಸ್ವಾಗತ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.