ಶಿವಮೊಗ್ಗದ 5 ಕರಾಟೆ ಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಶಿವಮೊಗ್ಗ: ನಗರದ ನೆಹರೂ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು.
ಈ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಭಾಗವಹಿಸಿದ್ದ ಐವರು ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ ರೋಷನ್, ಶಹಬಾಜ್, ಲಿಖಿತ್, ಮಾನ್ವಿ ಹಾಗೂ ಶೀತಲ್ ಅವರು ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕರಾಟೆ 365 ಅಕಾಡೆಮಿಯ ಸಂಸ್ಥಾಪಕರಾದ ಸೆನ್ಸಿ ಮಂಜುನಾಥ್, ಸೆನ್ಸಿ ನವೀನ್, ಸೆನ್ಸಿ ಸಾದಿಕ್, ಸೆಂಪೈ ಆಶಿಕ್, ಸೆಂಪೈ ದೀಕ್ಷಾ ಹಾಗೂ ಸೆಂಪೈ ಮಧುಶ್ರೀ ಅವರು ಅಭಿನಂದನೆ ಸಲ್ಲಿಸಿ, ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
ಜಿಲ್ಲಾ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಈ ಐವರು ವಿದ್ಯಾರ್ಥಿಗಳು ಇದೀಗ ರಾಜ್ಯ ಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಲಿದ್ದು, ಮತ್ತಷ್ಟು ಯಶಸ್ಸು ಗಳಿಸುವ ನಿರೀಕ್ಷೆ ಮೂಡಿಸಿದ್ದಾರೆ.
ಹಲೋ ಶಿವಮೊಗ್ಗ — ನಿಮ್ಮ ಜಿಲ್ಲೆಯ ಸುದ್ದಿ, ನಿಮ್ಮ ಧ್ವನಿ.

Leave a Comment