ಶಾಲೆ ಬಿಟ್ಟ 83 ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತರಲು ಶಿವಮೊಗ್ಗ ಪೊಲೀಸರ ವಿಶೇಷ ಅಭಿಯಾನ

ಶಿವಮೊಗ್ಗ: ಶಾಲೆಯನ್ನು ಅರ್ಧಕ್ಕೆ ಬಿಟ್ಟು ಶಿಕ್ಷಣದಿಂದ ದೂರವಾಗಿದ್ದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸಮಾಜಮುಖಿ ಹೆಜ್ಜೆ ಇಟ್ಟಿದೆ.
ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್‌ರ “ಮರಳಿ ಶಾಲೆಗೆ” ಯೋಜನೆಯಡಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆ ಬಿಟ್ಟಿದ್ದ ಸುಮಾರು 83 ವಿದ್ಯಾರ್ಥಿಗಳನ್ನು ಗುರುತಿಸಿ, ಅವರನ್ನು ಮತ್ತೆ ಶಾಲೆಗೆ ಸೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು.
ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಹಾಗೂ ಅವರ ಭವಿಷ್ಯವನ್ನು ಉತ್ತಮಗೊಳಿಸುವ ಉದ್ದೇಶದಿಂದ ಈ ಸಮಾಜಮುಖಿ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಈ ಪ್ರಯತ್ನಕ್ಕೆ ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.