ಬಿ.ವೈ. ರಾಘವೇಂದ್ರ ಹುಟ್ಟುಹಬ್ಬ: ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರರು ಹಾಗೂ ಜನಪ್ರಿಯ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಬಿವೈಆರ್ ಅಭಿಮಾನಿ ಬಳಗದ ವತಿಯಿಂದ ಶಿವಮೊಗ್ಗ ನಗರದ ರವೀಂದ್ರನಗರ ಶ್ರೀ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅರ್ಚನೆ ನೆರವೇರಿಸಲಾಯಿತು.
ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಉತ್ತಮ ಆಯುರಾರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆಯನ್ನು ಮಾಡುವ ಶಕ್ತಿ ದೊರೆಯಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಬಿವೈಆರ್ ಅಭಿಮಾನಿ ಬಳಗದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಸಂಸದರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.

Leave a Comment