ಬಿ.ವೈ. ರಾಘವೇಂದ್ರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಂಸದ ಹಾಗೂ ಅಭಿವೃದ್ಧಿಯ ಹರಿಕಾರರಾದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಜಿಲ್ಲಾ ವಾಲಿಬಾಲ್ ಸಂಸ್ಥೆ ಹಾಗೂ ಬಿ.ವೈ. ರಾಘವೇಂದ್ರ ಅಭಿಮಾನಿ ಬಳಗದ ವತಿಯಿಂದ ಆಯೋಜಿಸಿದ್ದ ಪಂದ್ಯಾವಳಿಯನ್ನು ಸಂಸದರ ಪುತ್ರರಾದ ಯುವ ನಾಯಕರಾದ ಬಿ.ಆರ್. ಸುಭಾಷ್ ಮತ್ತು ಬಿ.ಆರ್. ಭಗತ್ ಉದ್ಘಾಟಿಸಿ, ಯುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸಿ, ಕ್ರೀಡಾಪಟುಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಪಂದ್ಯಾವಳಿಯಲ್ಲಿ ಯುನೈಟೆಡ್ ಶಿವಮೊಗ್ಗ ತಂಡ ಪ್ರಥಮ ಸ್ಥಾನ ಪಡೆದು ₹20,000 ನಗದು ಬಹುಮಾನ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ರಿಪ್ಪನ್‌ಪೇಟೆಯ ಸಿದ್ಧಿವಿನಾಯಕ ತಂಡ ದ್ವಿತೀಯ, ಮಿಶಾ ತೀರ್ಥಹಳ್ಳಿ ತಂಡ ತೃತೀಯ ಹಾಗೂ ಶಿವಮೊಗ್ಗ ಗ್ರಾಮಾಂತರ ತಂಡ ಚತುರ್ಥ ಸ್ಥಾನ ಪಡೆದವು.
ಕಾರ್ಯಕ್ರಮದಲ್ಲಿ ಮಾಜಿ ಪಾಲಿಕೆ ಸದಸ್ಯ ಐಡಿಯಲ್ ಗೋಪಿ, ಜಿಲ್ಲಾ ವಾಲಿಬಾಲ್ ಸಂಸ್ಥೆಯ ಶಶಿ ವಿಜಯ್, ಸಚಿನ್ ಪೂಜಾರಿ ಹಾಗೂ ಡಾ. ನಾಗರಾಜ್ ಸೇರಿದಂತೆ ಗಣ್ಯರು, ಕ್ರೀಡಾಪಟುಗಳು ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.
ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಡೆದ ಈ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆಯಿತು.

Leave a Comment