ಮೋಚಿಗರ ಸಂಘದಿಂದ ಮೊದಲನೇ ವರ್ಷದ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ನಗರದ ಅಶ್ವತ್ ನಗರದಲ್ಲಿರುವ ಶಿವಮೊಗ್ಗ ಜಿಲ್ಲಾ ಮೋಚಿಗರ ಸಭಾಭವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಮೋಚಿಗರ ಸಂಘದ ವತಿಯಿಂದ ಮೊದಲನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ಐದು ಪ್ರತಿಭಾವಂತ ವಿದ್ಯಾರ್ಥಿಗಳಾದ ಸಿಂಚನ ಜಿ., ಪ್ರಾರ್ಥನಾ ಎ., ತನು ಎನ್., ಆದ್ಯ ಎಸ್.ಜಿ. ಹಾಗೂ ನಂದಿತಾ ಆರ್. ಅವರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.
ಮೋಚಿಗರ ಸಂಘದ ಅಧ್ಯಕ್ಷರಾದ ಎಸ್. ರಾಜು, ಜಿಲ್ಲಾ ಗೌರವಾಧ್ಯಕ್ಷರಾದ ಎಂ. ಶಿವಣ್ಣ ಹಾಗೂ ಮಾಜಿ ಅಧ್ಯಕ್ಷರಾದ ಎಸ್. ಮಲ್ಲಪ್ಪ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಎಸ್.ಪಿ. ಶಿವಕುಮಾರ್ ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಸ್. ರಾಜು ಅವರು ಸಂಘದ ಕಟ್ಟಡದ ಅಭಿವೃದ್ಧಿಗಾಗಿ ₹25,000 ದೇಣಿಗೆ ನೀಡಿದರು.
ಮಾತನಾಡಿದ ಅಧ್ಯಕ್ಷ ಎಸ್. ರಾಜು ಅವರು, ಸಂಘದ ಅಭಿವೃದ್ಧಿಗೆ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕರೆ ನೀಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಇಂತಹ ಕಾರ್ಯಕ್ರಮಗಳು ಮುಂದುವರಿಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಪೋಷಕರು, ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.