ಸಾಗರದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಬಳಸಗೋಡು ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಯುವಕನನ್ನು ಸಾಗರ ತಾಲೂಕಿನ ಚಿಪ್ಳಿ ಗ್ರಾಮದ ಅರ್ಜುನ್ (19) ಎಂದು ಗುರುತಿಸಲಾಗಿದೆ.
ಅರ್ಜುನ್ ಅವರು ಸಾಗರದಿಂದ ಆನಂದಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಶಿವಮೊಗ್ಗ ಕಡೆಯಿಂದ ಸಾಗರದತ್ತ ಬರುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅರ್ಜುನ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಯುವಕನ ಅಕಾಲಿಕ ಸಾವಿನಿಂದ ಚಿಪ್ಳಿ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.
ಹಲೋ ಶಿವಮೊಗ್ಗ — ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು Subscribe ಮಾಡಿ, Like ಮತ್ತು Share ಮಾಡಿ

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.