ಶಿಕಾರಿಪುರದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಜನ್ಮದಿನಾಚರಣೆ: ಪೌರಕಾರ್ಮಿಕ ಮಕ್ಕಳಿಗೆ ವಿಶೇಷ ಗೌರವ

ಶಿಕಾರಿಪುರ: ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಾಗೂ ಈಶ್ವರ್ ಫೌಂಡೇಶನ್ ಸಹಯೋಗದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಧೀಮಂತ ನಾಯಕ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಶಿಕಾರಿಪುರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಶಿಕಾರಿಪುರದ ಪೌರಕಾರ್ಮಿಕರ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಬಳಿಕ ಪೌರಕಾರ್ಮಿಕ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪೌರಕಾರ್ಮಿಕರ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಪುಸ್ತಕ, ಪೆನ್ ಸೇರಿದಂತೆ ವಿಶೇಷ ಉಡುಗೊರೆಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಶಿಕಾರಿಪುರ ಪುರಸಭೆಯ ಪೌರ ನೌಕರರು, ವಾಟರ್ ಸಪ್ಲೈ ನೌಕರರು, ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಅಭಿಮಾನಿಗಳು ಒಟ್ಟಾಗಿ ಊಟ ಮಾಡಿ ಸಂತೋಷ ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರಿವಾಳ ಶಿವರಾಮ್, ಕೆಪಿಸಿಸಿ ಸದಸ್ಯೆ ಗೋಣಿ ಮಾಲತೇಶ್, ಕಾಂಗ್ರೆಸ್ ಮುಖಂಡ ಹಾಗೂ ಈಶ್ವರ್ ಫೌಂಡೇಶನ್ ಅಧ್ಯಕ್ಷ ಎನ್.ವಿ. ಈರೇಶ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜು ತರಲಘಟ್ಟ, ಪುರಸಭೆ ಮಾಜಿ ಸದಸ್ಯ ಗೋಣಿ ಪ್ರಕಾಶ್, ಉಳ್ಳಿ ದರ್ಶನ್, ಎನ್‌ಎಸ್‌ಯುಐ ನಗರ ಘಟಕದ ಅಧ್ಯಕ್ಷರು, ಪೌರ ನೌಕರರ ಸಂಘದ ಅಧ್ಯಕ್ಷ ಗಣೇಶ್, ಪ್ರಸಾದ್, ಶ್ರೀನಿವಾಸ್, ಅಹಿಂದ ಯುವ ಘಟಕದ ಅಧ್ಯಕ್ಷ ರಂಗಪ್ಪ, ಅಹಿಂದ ತಾಲೂಕು ಘಟಕದ ಅಧ್ಯಕ್ಷ ಶಶಾಂಕ್, ಮಾಧ್ಯಮ ಘಟಕದ ಪರಶುರಾಮ್, ಹಿತ್ಲ ಬನ್ನೂರು ಚರಣ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕೃಷಿಕ ಸಮಾಜ ನಿರ್ದೇಶಕ ಡಿ.ಡಿ. ಶಿವಕುಮಾರ್, ಭದ್ರಾಪುರ ಶಿವರಾಜ್, ಯುವ ನಾಯಕರಾದ ಶಿವಶಂಕರ್, ಡಾ.ಆರ್. ಗಿರೀಶ್, ಕಸಬಾ ಬ್ಯಾಂಕ್ ನಿರ್ದೇಶಕ ಅರುಣ್ ಈರೇಶ್ ಸೇರಿದಂತೆ ಹಲವು ಮುಖಂಡರು, ಅಭಿಮಾನಿಗಳು, ಪತ್ರಕರ್ತರು, ಹಿರಿಯ ಮುಖಂಡರು, ಮಹಿಳೆಯರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಅಧಿಕಾರ ವಿಕೇಂದ್ರೀಕರಣಕ್ಕೆ ಒತ್ತು ನೀಡಿದ ನಾಯಕರು ಹಾಗೂ ದೇಶದಲ್ಲಿ ತಂತ್ರಜ್ಞಾನ ಮತ್ತು ಡಿಜಿಟಲ್ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದವರು ಎಂದು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ಇದೇ ವೇಳೆ ಡಿ. ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಸಬಲೀಕರಣ ಹಾಗೂ ಬಡವರ ಪರವಾದ ಕಾರ್ಯಕ್ರಮಗಳನ್ನು ನೆನಪಿಸಲಾಯಿತು.
ಕಾರ್ಯಕ್ರಮದ ಮೂಲಕ ಪೌರಕಾರ್ಮಿಕರ ಸೇವೆಯನ್ನು ಗೌರವಿಸುವುದರ ಜೊತೆಗೆ, ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಂದೇಶವನ್ನು ನೀಡಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಈರೇಶ್ ಅವರು ಕೃತಜ್ಞತೆ ಹಾಗೂ ಶುಭಾಶಯಗಳನ್ನು ಸಲ್ಲಿಸಿದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.