ಶಿಕಾರಿಪುರ: ಪತ್ರಕರ್ತ ದೀಪು ದೀಕ್ಷಿತ್ ನಿಧನ
ಶಿಕಾರಿಪುರ: ಪಟ್ಟಣದ ದಾಸರ ಕೇರಿ ನಿವಾಸಿ ಹಾಗೂ ಪತ್ರಕರ್ತ ದೀಪು ದೀಕ್ಷಿತ್ (44) ಅವರು ಬುಧವಾರ ಬೆಳಿಗ್ಗೆ ಮನೆಯಲ್ಲಿ ಕುಸಿದು ಬಿದ್ದು ನಿಧನರಾಗಿದ್ದಾರೆ.
ಮೃತರು ಹಲವು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ ಛಾಯಾಗ್ರಾಹಕರ ಸಂಘದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ದೀಪು ದೀಕ್ಷಿತ್ ಅವರ ನಿಧನದ ಸುದ್ದಿ ತಿಳಿದು ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮೃತರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸಂತಾಪ ಸೂಚಿಸಿದರು.
ಮೃತರಿಗೆ ತಂದೆ, ತಾಯಿ, ಸಹೋದರ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.
ಬ್ರಾಹ್ಮಣ ಸಂಪ್ರದಾಯದಂತೆ ಬುಧವಾರ ಸಂಜೆ ಶಿಕಾರಿಪುರದ ಹಿಂದು ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.
ದೀಪು ದೀಕ್ಷಿತ್ ಅವರ ನಿಧನಕ್ಕೆ ಪತ್ರಿಕಾ ವಲಯ ಹಾಗೂ ಛಾಯಾಗ್ರಾಹಕರ ಸಂಘದ ಸದಸ್ಯರು ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಲೋ ಶಿವಮೊಗ್ಗ — ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು Subscribe ಮಾಡಿ, Like ಮತ್ತು Share ಮಾಡಿ.

Leave a Comment