ಸಾರ್ವಜನಿಕರ ಅನುಕೂಲಕ್ಕಾಗಿ ‘ಸಮಾಧಾನ ಕಟ್ಟೆ’ ಉದ್ಘಾಟನೆ
ಶಿವಮೊಗ್ಗ: ಪೊಲೀಸ್ ಠಾಣೆಗೆ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ಹಾಗೂ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ನಗರದ ಪೂರ್ವ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ **‘ಸಮಾಧಾನ ಕಟ್ಟೆ’**ಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ., ಐಪಿಎಸ್ ಅವರು ಉದ್ಘಾಟಿಸಿದರು.
ಆಗಸ್ಟ್ 15ರಂದು ನಡೆದ ಕಾರ್ಯಕ್ರಮದಲ್ಲಿ, ಪೊಲೀಸ್ ಠಾಣೆಗೆ ವಿವಿಧ ಕೆಲಸಗಳಿಗಾಗಿ ಆಗಮಿಸುವ ಸಾರ್ವಜನಿಕರು ಕುಳಿತುಕೊಳ್ಳಲು ಹಾಗೂ ಕಾಯಲು ಅನುಕೂಲವಾಗುವಂತೆ ನಿರ್ಮಿಸಿರುವ ಸಮಾಧಾನ ಕಟ್ಟೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.
ಪೊಲೀಸ್ ಠಾಣೆಗೆ ಆಗಮಿಸುವ ಸಾರ್ವಜನಿಕರಿಗೆ ಉತ್ತಮ ವಾತಾವರಣ ಮತ್ತು ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕಾರಿಯಪ್ಪ, ಶಿವಮೊಗ್ಗ ‘ಬಿ’ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಸಂಜೀವ್ ಕುಮಾರ್, ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ದೇವರಾಜ್ ಟಿ.ವಿ., ಪೂರ್ವ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗಳ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು

Leave a Comment