ಚಂದ್ರಗುತ್ತಿ ಸಮೀಪ ತಾಯಿ–ಮಗಳ ಪ್ರಾಣ ರಕ್ಷಿಸಿದ ಯುವಕರಿಗೆ ಪೊಲೀಸ್ ಇಲಾಖೆಯಿಂದ ಸನ್ಮಾನ

ಸಮಯ ಪ್ರಜ್ಞೆ ಮೆರೆದ ಸಾಹಿಲ್, ಸೋನು ಹಾಗೂ ಯಾಸಿನ್ ಅವರ ಕಾರ್ಯಕ್ಕೆ ಮೆಚ್ಚುಗೆ
ಸೊರಬ: ಗಂಡ–ಹೆಂಡತಿ ನಡುವೆ ಜಗಳ ನಡೆದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆಯೊಬ್ಬರು ತನ್ನ ಮಗಳೊಂದಿಗೆ ಚಂದ್ರಗುತ್ತಿ ಸಮೀಪದ ವರದಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಈ ವೇಳೆ ತಾಯಿಯು ತನ್ನ ಮಗಳನ್ನು ನದಿಗೆ ತಳ್ಳಲು ಮುಂದಾಗಿದ್ದು, ಮಗಳು ಕೂಗಿಕೊಂಡಿದ್ದಾಳೆ. ಕೂಗನ್ನು ಕೇಳಿದ ಅಲ್ಲಿಯೇ ಮೀನು ಹಿಡಿಯುತ್ತಿದ್ದ ಯುವಕರಾದ ಸಾಹಿಲ್, ಸೋನು ಹಾಗೂ ಯಾಸಿನ್ ಚಿಕ್ಕಮಾಕೊಪ್ಪ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ತಾಯಿ ಹಾಗೂ ಮಗಳನ್ನು ರಕ್ಷಿಸಿದ್ದಾರೆ.
ಯುವಕರು ಸಮಯ ಪ್ರಜ್ಞೆ ಹಾಗೂ ಧೈರ್ಯದಿಂದ ಕಾರ್ಯನಿರ್ವಹಿಸಿ ಇಬ್ಬರ ಪ್ರಾಣವನ್ನು ಉಳಿಸಿರುವುದನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸೊರಬ ಪೊಲೀಸ್ ಠಾಣೆ ವತಿಯಿಂದ ಶ್ಲಾಘಿಸಲಾಯಿತು. ಈ ಹಿನ್ನೆಲೆಯಲ್ಲಿ ಸಾಹಿಲ್, ಸೋನು ಹಾಗೂ ಯಾಸಿನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಾರ್ವಜನಿಕರ ಸಮಯ ಪ್ರಜ್ಞೆ ಹಾಗೂ ಮಾನವೀಯ ಕಾಳಜಿಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಈ ಸಂದರ್ಭದಲ್ಲಿ ಸೊರಬ ವೃತ್ತದ ಸಿಪಿಐ ಹಾಗೂ ಸೊರಬ ಪೊಲೀಸ್ ಠಾಣೆಯ ಪಿಎಸ್ಐ ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.