ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಭೀಕರ ಹಠಾತ್ ಪ್ರವಾಹ -ಕರ್ನಾಟಕದವರ ಸುರಕ್ಷತೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ :ಸಿಎಂ
ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಕರ್ನಾಟಕದವರು ಸಿಲುಕಿದ್ದರೆ, ಅವರನ್ನು ಗುರುತಿಸಿ ಅಗತ್ಯ ನೆರವು ಒದಗಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹಾಗೂ ಭಾರತೀಯ ರಾಯಭಾರಿ ಕಚೇರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
“ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ಮತ್ತು ಕ್ಷೇಮವೇ ನಮ್ಮ ಮೊದಲ ಆದ್ಯತೆ. ಪ್ರವಾಹ ಹಾಗೂ ಸಂಪರ್ಕ ವ್ಯತ್ಯಯದ ಹಿನ್ನೆಲೆಯಲ್ಲಿ ಕರ್ನಾಟಕದವರು ಯಾರಾದರೂ ಅಲ್ಲಿ ಸಿಲುಕಿದ್ದರೆ, ಅವರನ್ನು ಗುರುತಿಸಿ ನೆರವು ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ” ಎಂದು ಅವರು ಹೇಳಿದ್ದಾರೆ.
ನೇಪಾಳ ಅಥವಾ ಟಿಬೆಟ್‌ನಲ್ಲಿ ಸಿಲುಕಿರುವವರು, ಅವರ ಕುಟುಂಬಸ್ಥರು ಹಾಗೂ ಪ್ರವಾಸ ಆಯೋಜಕರು ಅಗತ್ಯ ಮಾಹಿತಿಯನ್ನು ಸರ್ಕಾರ ಒದಗಿಸಿರುವ ಗೂಗಲ್ ಫಾರ್ಮ್ ಮೂಲಕ ಹಂಚಿಕೊಳ್ಳುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.
ತುರ್ತು ನೆರವು ಅಥವಾ ಮಾಹಿತಿಗಾಗಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ 1070 ಅಥವಾ 080-22253707 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. seockarnataka@gmail.com ಇ-ಮೇಲ್ ಮೂಲಕವೂ ಮಾಹಿತಿ ನೀಡಬಹುದಾಗಿದೆ.
ಪ್ರವಾಹದಿಂದ ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ರಸ್ತೆ, ಸೇತುವೆ ಹಾಗೂ ಸಂಪರ್ಕ ವ್ಯವಸ್ಥೆಗಳು ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಹಾನಿ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹಲವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಆತಂಕಕಾರಿಯಾಗಿದೆ.
ಕರ್ನಾಟಕದ ಯಾವುದೇ ವ್ಯಕ್ತಿ ಸಂಕಷ್ಟದಲ್ಲಿ ಸಿಲುಕಿರುವ ಮಾಹಿತಿ ಇದ್ದರೆ ಕೂಡಲೇ ಸರ್ಕಾರದ ಸಹಾಯವಾಣಿಗೆ ಸಂಪರ್ಕಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಮುಖ್ಯಾಂಶ:
👉 ನೇಪಾಳ–ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ
👉 ಕರ್ನಾಟಕದವರ ಸುರಕ್ಷತೆಗೆ ಸರ್ಕಾರದ ಕ್ರಮ
👉 ಸಿಲುಕಿರುವ ಕನ್ನಡಿಗರ ಮಾಹಿತಿ ನೀಡಲು ಮನವಿ
👉 ಕುಟುಂಬಸ್ಥರು, ಪ್ರವಾಸ ಆಯೋಜಕರಿಗೆ ಮನವಿ
👉 ಸಹಾಯವಾಣಿ: 1070 / 080-22253707

Leave a Comment