ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ -ಶಿವಮೊಗ್ಗದಲ್ಲಿ ಉಚಿತ ಸಾರ್ವಜನಿಕ ಆರೋಗ್ಯ ತಪಾಸಣಾ ಶಿಬಿರ
ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಸಂಕಲ್ಪ’ ಅಭಿಯಾನದ ಭಾಗವಾಗಿ ಶಿವಮೊಗ್ಗ ನಗರದಲ್ಲಿ ಉಚಿತ ಸಾರ್ವಜನಿಕ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಪಂಡಿತ್ ದೀನದಯಾಳ್ ಟ್ರಸ್ಟ್, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ನಡೆದ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆ, ನೇತ್ರ ಪರೀಕ್ಷೆ ಹಾಗೂ ಉಚಿತ ಔಷಧೋಪಚಾರದ ಸೌಲಭ್ಯ ಕಲ್ಪಿಸಲಾಯಿತು.
ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕ ಎಸ್.ಎನ್. ಚನ್ನಬಸಪ್ಪ, ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ಹಾಗೂ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಜನಸಾಮಾನ್ಯರ ಆರೋಗ್ಯ ರಕ್ಷಣೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ವೈದ್ಯಕೀಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಇಂತಹ ಆರೋಗ್ಯ ಶಿಬಿರಗಳ ಮಹತ್ವವನ್ನು ಒತ್ತಿಹೇಳಿದರು.
ಶಿಬಿರದಲ್ಲಿ ರೋಗ ತಡೆಗಟ್ಟುವಿಕೆ, ಆರೋಗ್ಯ ತಪಾಸಣೆ, ನೇತ್ರ ಪರೀಕ್ಷೆ ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸಲಹೆ ಮತ್ತು ಸೇವೆಗಳನ್ನು ಒದಗಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಮಂಜುನಾಥ್ ನವುಲೆ, ಸುಮೇಶ್ ಪಿ. ಶೇಟ್, ಲಕ್ಷ್ಮಣ್, ಹರೀಶ್, ವಿದ್ಯಾನಗರ ಮೋಹನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್, ದುರ್ಗ ಪ್ರಸಾದ್, ಮಲ್ಲಿಕಾರ್ಜುನ್, ದೇವರಾಜ್ ಮಂಡನೆಕೊಪ್ಪ ಸೇರಿದಂತೆ ಪಕ್ಷದ ಮುಖಂಡರು, ಟ್ರಸ್ಟ್‌ನ ಪದಾಧಿಕಾರಿಗಳು, ವೈದ್ಯರು, ಸಿಬ್ಬಂದಿ ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಜನರ ಆರೋಗ್ಯದ ಕಾಳಜಿಯೊಂದಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸುವ ಮೂಲಕ ‘ಸೇವಾ ಸಂಕಲ್ಪ’ ಅಭಿಯಾನದಡಿ ಈ ಶಿಬಿರ ಗಮನ ಸೆಳೆಯಿತು.
ಇದು ಹಲೋ ಶಿವಮೊಗ್ಗ.

Leave a Comment