ಕುಳ್ಳಿ ಕಿರಣ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಕಾಲಿಗೆ ಪೊಲೀಸರಿಂದ ಗುಂಡೇಟು
ಶಿವಮೊಗ್ಗ: ನಗರದ ಸೀಗೆಹಟ್ಟಿ ಮೂಲದ ಕುಳ್ಳಿ ಕಿರಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಕಾರ್ಯಾಚರಣೆ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ವರದಿಯಾಗಿದೆ.
ಈ ಪ್ರಕರಣದಲ್ಲಿ ಉಮೇಶ್ ನಾಯ್ಕ್, ಉಮೇಶ್ ಹೊಸಕೊಪ್ಪ, ಬಾಬು ರಾಜೇಂದ್ರ ಪ್ರಸಾದ್ ಹೊಸಕೊಪ್ಪ, ಸುನೀಲ್ ಹೊಸಕೊಪ್ಪ ಹಾಗೂ ಮನೋಜ್ ಶಿವಮೊಗ್ಗ ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಸುಮಾರು 50 ಸಾವಿರ ರೂಪಾಯಿ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವೈಷಮ್ಯವೇ ಕೊಲೆಗೆ ಕಾರಣ ಎನ್ನಲಾಗಿದೆ. ಹಣಕಾಸಿನ ವಿಚಾರದಲ್ಲಿ ಉಂಟಾದ ಗಲಾಟೆ ಬಳಿಕ ಕುಳ್ಳಿ ಕಿರಣ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು, ಕೊಲೆಯ ಹಿಂದಿನ ನಿಖರ ಕಾರಣ, ಬಳಸಲಾದ ಮಾರಕಾಸ್ತ್ರ ಹಾಗೂ ಆರೋಪಿಗಳ ಪಾತ್ರದ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.
ಕುಳ್ಳಿ ಕಿರಣ್ ಕೊಲೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಪ್ರಕರಣದ ತನಿಖೆಗೆ ಮಹತ್ವದ ಮುನ್ನಡೆ ದೊರೆತಂತಾಗಿದೆ.
ತುಂಗಾನಗರ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಹಾಗೂ ಪೊಲೀಸ್ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ
ಕೊಲೆ ನಡೆದ ಮರುದಿನವೇ ಆರೋಪಿಯೊಬ್ಬನಿಗೆ ಗುಂಡೇಟು ಬಿದ್ದಿರುವುದು ಹಾಗೂ ಐವರು ಆರೋಪಿಗಳ ಬಂಧನವಾಗಿರುವುದು ಪ್ರಕರಣದ ಪ್ರಮುಖ ಬೆಳವಣಿಗೆಯಾಗಿದೆ.
ಕಿರಣ್ ಕೊಲೆ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಭೇದಿಸಿ ಆರೋಪಿಗಳನ್ನು ಬಂಧಿಸಿರುವ ತುಂಗಾನಗರ ಠಾಣೆಯ ಇನ್ಸ್‌ಪೆಕ್ಟರ್ ಕೆ.ಟಿ. ಗುರುರಾಜ್ ಹಾಗೂ ಪೊಲೀಸ್ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಹೊರಬರುತ್ತಿದ್ದಂತೆ ‘ಹಲೋ ಶಿವಮೊಗ್ಗ’ದಲ್ಲಿ ನಿಮಗೆ ತಿಳಿಸುತ್ತೇವೆ

Leave a Comment