ಸೆ.20 ರಂದು ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಶಿವಮೊಗ್ಗ ವತಿಯಿಂದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮವು ಸೆಪ್ಟೆಂಬರ್ 20, 2026ರ ಭಾನುವಾರ ಮಧ್ಯಾಹ್ನ 12.30 ಗಂಟೆಗೆ ಶಿವಮೊಗ್ಗ ನಗರದ ಕೆ.ಇ.ಬಿ. ವೃತ್ತದ ಸಮೀಪದಲ್ಲಿರುವ ನೂತನ ಸರ್ಕಾರಿ ನೌಕರರ ಸಭಾ ಭವನದಲ್ಲಿ ನಡೆಯಲಿದೆ.

ಸಭೆಯಲ್ಲಿ ಸಹಕಾರಿಯ ಸದಸ್ಯರು ಭಾಗವಹಿಸಿ, ಸಂಘದ ಚಟುವಟಿಕೆಗಳ ಕುರಿತು ತಮ್ಮ ಸಲಹೆ ಹಾಗೂ ಸೂಚನೆಗಳನ್ನು ನೀಡುವಂತೆ ಅಧ್ಯಕ್ಷರಾದ ಆರ್. ಮೋಹನ್ ಕುಮಾರ್ ಅವರು ಮನವಿ ಮಾಡಿದ್ದಾರೆ.

ಎಲ್ಲ ಗೌರವಾನ್ವಿತ ಸದಸ್ಯರು ಸಮಯಕ್ಕೆ ಸರಿಯಾಗಿ ಸಭೆಗೆ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಆಡಳಿತ ಮಂಡಳಿ ಕೋರಿದೆ.

— ಎನ್.ಎಂ. ರಂಗನಾಥ, ಗೌರವ ಕಾರ್ಯದರ್ಶಿ

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.