ಶಿವಮೊಗ್ಗದಲ್ಲಿ ರೈಲ್ವೆ ಫ್ಲೈಓವರ್ ಮೇಲೆ ಸರಣಿ ಅಪಘಾತ!
ಆಟೋ, ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಪಘಾತದ ಪರಿಣಾಮ ಫ್ಲೈಓವರ್‌ನಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸ್ಥಳಕ್ಕೆ ಸಂಬಂಧಪಟ್ಟವರು ಹಾಗೂ ಪೊಲೀಸರು ಆಗಮಿಸಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ವಾಹನಗಳ ವೇಗ, ಚಾಲಕರ ನಿಯಂತ್ರಣ ಸೇರಿದಂತೆ ವಿವಿಧ ಅಂಶಗಳ ಕುರಿತು ಪರಿಶೀಲನೆ ನಡೆಯುತ್ತಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಶಿವಮೊಗ್ಗ ನಗರದ ಪ್ರಮುಖ ಸಂಚಾರ ಮಾರ್ಗವಾಗಿರುವ ರೈಲ್ವೆ ಫ್ಲೈಓವರ್‌ನಲ್ಲಿ ಸರಣಿ ಅಪಘಾತ ಸಂಭವಿಸಿರುವುದು ವಾಹನ ಸವಾರರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಹೆಚ್ಚಿನ ಮಾಹಿತಿ ಲಭ್ಯವಾದಂತೆ ಹಲೋ ಶಿವಮೊಗ್ಗದಲ್ಲಿ ಅಪ್‌ಡೇಟ್ ನೀಡಲಾಗುವುದು.

Leave a Comment