ಶಿವಮೊಗ್ಗ ಬುದ್ಧನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಆರೋಪ! ಪೊಲೀಸರು ಪೊಲೀಸರ ದಾಳಿ | ಕೆ.ಜಿ.ಗಟ್ಟಲೆ ಮಾಂಸ ವಶ

ಶಿವಮೊಗ್ಗ ನಗರದ ಬುದ್ಧನಗರದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಾಳಿ ನಡೆಸಿ ಕೆ.ಜಿ.ಗಟ್ಟಲೆ ಮಾಂಸವನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಬುದ್ಧನಗರದ ಒಂದನೇ ಕ್ರಾಸ್ ಬಳಿ ಅಕ್ರಮವಾಗಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಇದೇ ಸ್ಥಳದಲ್ಲಿ ಈ ಹಿಂದೆ ಕೂಡ ಹಲವು ಬಾರಿ ದಾಳಿ ನಡೆದಿದ್ದರೂ ಮತ್ತೆ ಅಕ್ರಮವಾಗಿ ಮಾಂಸ ಮಾರಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಐದನೇ ಬಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ.

ಅಕ್ರಮ ಗೋಮಾಂಸ ಮಾರಾಟದ ಕುರಿತು ಸುಮಾರು 12 ದಿನಗಳ ಹಿಂದೆಯೇ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಅವರಿಗೆ ಮಾಹಿತಿ ನೀಡಲಾಗಿತ್ತು ಎನ್ನಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪವೂ ಕೇಳಿಬಂದಿದೆ.

ಈ ನಡುವೆ ಅಕ್ರಮವಾಗಿ ಮಾಂಸ ಮಾರಾಟ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸ್ಥಳಕ್ಕೆ ತೆರಳಿದ್ದಾರೆ. ಸ್ಥಳದಿಂದ ಸ್ವಲ್ಪ ದೂರದಲ್ಲಿದ್ದುಕೊಂಡೇ ಪರಿಸ್ಥಿತಿಯನ್ನು ಪರಿಶೀಲಿಸಿದ ಕಾರ್ಯಕರ್ತರು, ಮಾಂಸ ಮಾರಾಟ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಳಿಕ 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ಬುದ್ಧನಗರದ ಒಂದನೇ ಕ್ರಾಸ್ ಬಳಿ ಅಕ್ರಮವಾಗಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ.

ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಅಕ್ರಮವಾಗಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎನ್ನಲಾದ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಕೆ.ಜಿ.ಗಟ್ಟಲೆ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ. ವಶಕ್ಕೆ ಪಡೆದ ಮಾಂಸದ ಸ್ವರೂಪ ಹಾಗೂ ಪ್ರಕರಣದ ಸಂಪೂರ್ಣ ವಿವರಗಳನ್ನು ಪೊಲೀಸರು ಅಧಿಕೃತವಾಗಿ ತಿಳಿಸಬೇಕಿದೆ.

ಅಕ್ರಮ ಮಾಂಸ ಮಾರಾಟದ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ದಾಳಿ ಇದೀಗ ಶಿವಮೊಗ್ಗದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದು ಹಲೋ ಶಿವಮೊಗ್ಗ. ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು Subscribe ಮಾಡಿ,

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.