ಶಿವಮೊಗ್ಗದಲ್ಲಿ ‘ವಿಕಸಿತ ಭಾರತಕ್ಕಾಗಿ ಸೈಕಲ್ ಜಾಥಾ’

ಶಿವಮೊಗ್ಗ: ಸ್ವಸ್ಥ ಸಮಾಜ ಹಾಗೂ ಹಸಿರು ಭವಿಷ್ಯದ ಸಂದೇಶ ಸಾರುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ ‘ವಿಕಸಿತ ಭಾರತಕ್ಕಾಗಿ ಸೈಕಲ್ ಜಾಥಾ’ ಆಯೋಜಿಸಲಾಗಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನೋತ್ಸವದ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಸಂಕಲ್ಪ’ ಅಭಿಯಾನದ ಪ್ರಯುಕ್ತ ದೀನ್ ದಯಾಳ್ ಟ್ರಸ್ಟ್ ವತಿಯಿಂದ ಈ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಸೈಕಲ್ ಜಾಥಾದಲ್ಲಿ ಮಾಜಿ ಸಚಿವರು ಹಾಗೂ ಬೆಂಗಳೂರಿನ ರಾಜಾಜಿನಗರ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್, ಬಿಜೆಪಿ ಶಿವಮೊಗ್ಗ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ನಗರಾಧ್ಯಕ್ಷ ಮೋಹನ್ ರೆಡ್ಡಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್. ದತ್ತಾತ್ರಿ, ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ಪ್ರಮುಖರಾದ ಜ್ಯೋತಿ ಪ್ರಕಾಶ್, ಸೈಕಲ್ ಜಾಥಾ ಪ್ರಮುಖರಾದ ಜಿಲ್ಲಾ ಮಾಧ್ಯಮದ ಚಂದ್ರಶೇಖರ್ ಎಸ್., ಮಂಜುನಾಥ್ ಎನ್., ನಗರ ಮಾಧ್ಯಮದ ಶ್ರೀನಾಗ್ ಹಾಗೂ ನಗರ ಸಾಮಾಜಿಕ ಜಾಲತಾಣದ ಮುರಳಿ ಸೇರಿದಂತೆ ಜಿಲ್ಲಾ ಮತ್ತು ನಗರ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಆರೋಗ್ಯಕರ ಜೀವನಶೈಲಿ, ಪರಿಸರ ಸಂರಕ್ಷಣೆ ಮತ್ತು ಹಸಿರು ಭವಿಷ್ಯದ ಕುರಿತು ಜಾಗೃತಿ ಮೂಡಿಸುವ ಸಂದೇಶದೊಂದಿಗೆ ಸೈಕಲ್ ಜಾಥಾ ನಡೆಯಿತು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.