ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಪಾದಯಾತ್ರೆ | ಬಿ.ವೈ. ರಾಘವೇಂದ್ರ ಭಾಗಿ

ಶಿವಮೊಗ್ಗ ಜಿಲ್ಲೆಯ ಗಾಜನೂರು ಭಾಗದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಗಾಜನೂರು ಮಹಾಶಕ್ತಿ ಕೇಂದ್ರದ ವತಿಯಿಂದ ಎರಡನೇ ದಿನದ ಜನಪರ ಪಾದಯಾತ್ರೆ ಹಾಗೂ ಜನಜಾಗೃತಿ ಸಭೆ ನಡೆಯಿತು.
ಪಾದಯಾತ್ರೆಯಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ, ಮಲೆನಾಡಿನ ರೈತರ ಹಕ್ಕುಗಳು ಮತ್ತು ಬದುಕಿನ ಭದ್ರತೆಯ ಪರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಗಾಜನೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 15ಕ್ಕೂ ಹೆಚ್ಚು ಗ್ರಾಮಗಳ ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶಗಳ ಸಂರಕ್ಷಣೆಯ ಹೆಸರಿನಲ್ಲಿ ರೈತರ ಜಮೀನು ಹಾಗೂ ಜನವಸತಿ ಪ್ರದೇಶಗಳಿಗೆ ತೊಂದರೆಯಾಗಬಾರದು. ಕಂದಾಯ ಮತ್ತು ಅರಣ್ಯ ಇಲಾಖೆಗಳ ನಡುವಿನ ಗೊಂದಲಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ದಾವಣಗೆರೆ ವಿಭಾಗ ಪ್ರಭಾರಿ ಟಿ.ಡಿ. ಮೇಘರಾಜ್, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷ ನವೀನ್ ಹೆದ್ದೂರು ಸೇರಿದಂತೆ ಬಿಜೆಪಿ ಮುಖಂಡರು, ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮಲೆನಾಡಿನ ಜನರ ಹಿತರಕ್ಷಣೆಗಾಗಿ ಬಿಜೆಪಿ ಮುಂದೆಯೂ ಹೋರಾಟ ಮುಂದುವರಿಸಲಿದೆ ಎಂದು ಮುಖಂಡರು ತಿಳಿಸಿದ್ದಾರೆ.
ಇಂತಹ ಸ್ಥಳೀಯ ಸುದ್ದಿಗಳಿಗಾಗಿ ಹಲೋ ಶಿವಮೊಗ್ಗ ಚಾನೆಲ್‌ನ್ನು ಸಬ್‌ಸ್ಕ್ರೈಬ್ ಮಾಡಿ, ವಿಡಿಯೋಗೆ ಲೈಕ್ ಮಾಡಿ ಮತ್ತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.