ಕುವೆಂಪು ವಿವಿಯಲ್ಲಿ ಮಹಿಳಾ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ಒಂದು ಮಹಿಳಾ ವೈದ್ಯರ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ವೈದ್ಯರ ಹುದ್ದೆಯನ್ನು ತಾತ್ಕಾಲಿಕ ಅಥವಾ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 19, 2026ರೊಳಗಾಗಿ ಕುಲಸಚಿವರು, ಕುವೆಂಪು ವಿಶ್ವವಿದ್ಯಾಲಯ, ಜ್ಞಾನ ಸಹ್ಯಾದ್ರಿ, ಶಂಕರಘಟ್ಟ – 577451, ಶಿವಮೊಗ್ಗ ಜಿಲ್ಲೆ ಎಂಬ ವಿಳಾಸಕ್ಕೆ ಸಲ್ಲಿಸಬೇಕು ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಅರ್ಜಿ ನಮೂನೆ, ಶೈಕ್ಷಣಿಕ ಅರ್ಹತೆ, ಹುದ್ದೆಯ ನಿಯಮಗಳು ಹಾಗೂ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ kuvempu.ac.inಗೆ ಭೇಟಿ ನೀಡಬಹುದು.

ಹೀಗಾಗಿ, ಅರ್ಹ ಮಹಿಳಾ ವೈದ್ಯರು ಸೆಪ್ಟೆಂಬರ್ 19ರೊಳಗೆ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

ಹೆಚ್ಚಿನ ಸ್ಥಳೀಯ ಸುದ್ದಿಗಳಿಗಾಗಿ ‘ಹಲೋ ಶಿವಮೊಗ್ಗ’ ಚಾನೆಲ್‌ ಸಬ್‌ಸ್ಕ್ರೈಬ್ ಮಾಡಿ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.