*ಸುಧಾ ಕೋ-ಆಪರೇಟಿವ್ ಬ್ಯಾಂಕ್ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದ ಸಚಿವ ಮಧು ಬಂಗಾರಪ್ಪ*
ಬೆಂಗಳೂರು, ಸೆ.12: ಬೆಂಗಳೂರಿನ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಸುವರ್ಣ ಮಹೋತ್ಸವ ಸಮಾರಂಭವು ನಗರದ ಜಿ.ಪಿ. ನಗರದ ಸಿಂಧೂರ ಕನ್ವೆನ್ಷನ್ ಹಾಲ್‌ನಲ್ಲಿ ಇಂದು ನಡೆಯಿತು.
ಸಮಾರಂಭದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರು ಭಾಗವಹಿಸಿ, ಬ್ಯಾಂಕ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಶುಭ ಹಾರೈಸಿದರು.
ಐದು ದಶಕಗಳ ಕಾಲ ಸಹಕಾರ ಕ್ಷೇತ್ರದಲ್ಲಿ ಬ್ಯಾಂಕ್ ಸಲ್ಲಿಸಿರುವ ಸೇವೆ ಹಾಗೂ ಗ್ರಾಹಕರಿಗೆ ನೀಡುತ್ತಿರುವ ಸೇವೆಯನ್ನು ಗಣ್ಯರು ಸ್ಮರಿಸಿದರು. ಸಹಕಾರ ಬ್ಯಾಂಕ್‌ಗಳು ಜನಸಾಮಾನ್ಯರ ಆರ್ಥಿಕ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಸ್ಥಳೀಯ ಮಟ್ಟದಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಎಂ. ತಿಮ್ಮೇಗೌಡ ಸೇರಿದಂತೆ ಬ್ಯಾಂಕ್‌ನ ನಿರ್ದೇಶಕರು, ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಗಣ್ಯರು ಉಪಸ್ಥಿತರಿದ್ದರು.

Leave a Comment