ಸಹಕಾರ ಕ್ಷೇತ್ರದ ಸಾಧನೆಯಲ್ಲಿ ಹೊಸ ಭಾಷ್ಯ ಬರೆದ ನೌಕರರ ಸಹಕಾರ ಸಂಘ : ಸಿ.ಎಸ್.ಷಡಾಕ್ಷರಿ

ಶಿವಮೊಗ್ಗ :: ಅತ್ಯಂತ ಕಡಿಮೆ ದರದಲ್ಲಿ ಅತಿ ಹೆಚ್ಚು ಸರ್ಕಾರಿ ನೌಕರರಿಗೆ ಯಶಸ್ವಿಯಾಗಿ ನಿವೇಶನಗಳನ್ನು (ಸೈಟುಗಳನ್ನು) ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ನೌಕರರ ವಸತಿ ಕನಸನ್ನು ನನಸು ಮಾಡುವಲ್ಲಿ ಸಂಘವು ಪ್ರಾಮಾಣಿಕವಾಗಿ ಶ್ರಮಿಸಿದೆ ಮತ್ತು ಮುಂದೆಯೂ ಈ ಸೇವೆ ಮುಂದುವರಿಯಲಿದೆ" ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಹೇಳಿದರು.
ಅವರು ನಿನ್ನೆ ನಗರದ ಕೆ.ಇ.ಬಿ.ವೃತ್ತದಲ್ಲಿ ನಿರ್ಮಾಣ ಹಂತದಲ್ಲಿರುವ ನೌಕರರ ಸಂಘದ ನೂತನ ಭವ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಗೃಹನಿರ್ಮಾಣ ಸಹಕಾರ ಸಂಘ ಮತ್ತು ರಾಜ್ಯ ಸರ್ಕಾರಿ ನೌಕರರ ಸೌಹಾರ್ಧ ಸಹಕಾರ ಸಂಘಗಳ ಸರ್ವ  ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.
ಪ್ರಸಕ್ತ ಸಾಲಿನಲ್ಲಿ ಸಂಘವು  ರೂ. 81.87 ಲಕ್ಷ  ನಿವ್ವಳ ಲಾಭವನ್ನು ಗಳಿಸಿದೆ. ಮುಂಬರುವ ವರ್ಷಗಳಲ್ಲಿ ನೌಕರರ ಕಲ್ಯಾಣಕ್ಕಾಗಿ ಇನ್ನಷ್ಟು ವಿನೂತನ ಯೋಜನೆಗಳನ್ನು ಹಮ್ಮಿಕೊಳ್ಳಲು ಸಂಘದ ಆಡಳಿತ ಮಂಡಳಿ ನಿರ್ಧರಿಸಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಆರ್.ಮೋಹನ್ ಕುಮಾರ್ ಅವರು ಮಾತನಾಡಿ, ಸಹಕಾರಿ ಸಂಘವು ತನ್ನ ಸದಸ್ಯರಿಗೆ ಅತೀ ಕಡಿಮೆ ಬಡ್ಡಿದರದಲ್ಲಿ, ಸರಳ ದಾಖಲಾತಿಗಳೊಂದಿಗೆ ತ್ವರಿತವಾಗಿ ಸಾಲ ಸೌಲಭ್ಯಗಳನ್ನು ಒದಗಿಸುತ್ತಿದೆ. ಇದರಿಂದಾಗಿ ಸಾವಿರಾರು ನೌಕರರ ಆರ್ಥಿಕ ಸಂಕಷ್ಟಗಳು ಪರಿಹಾರವಾಗಿದೆ.   ಪ್ರಸಕ್ತ ಸಾಲಿನಲ್ಲಿ ಸಂಘವು ರೂ. 65 ಕೋಟಿಗೂ ಅಧಿಕ ಒಟ್ಟು ವಹಿವಾಟು ನಡೆಸಿದ್ದು, ರೂ. 1.64 ಕೋಟಿ ನಿವ್ವಳ ಲಾಭವನ್ನು ಗಳಿಸಿದೆ. ಮುಂಬರುವ ಸಾಲಿನಲ್ಲಿ ನೌಕರರ ಹಿತಕ್ಕಾಗಿ ಹಲವು ಆರ್ಥಿಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಿದೆ ಎಂದರು.
ಸಭೆಯಲ್ಲಿ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳು, ಸದಸ್ಯರ ಹಿತಾಸಕ್ತಿ, ಸಂಘದ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿ ಸಲಾಯಿತು.
ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಭವಿಷ್ಯದ ಶೈಕ್ಷಣಿಕ ಪಯಣಕ್ಕೆ ಶುಭ ಹಾರೈಸಲಾಯಿತು.
ಸದಸ್ಯರ ಹಿತಾಸಕ್ತಿ, ಸಂಘದ ಅಭಿವೃದ್ಧಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕೆ ಆದ್ಯತೆ ನೀಡುವ ಮೂಲಕ ಸಹಕಾರದ ಆಶಯಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
ಕಾಠ್ಯಕ್ರಮದಲ್ಲಿ ಸಹಕಾರ ಮಹಾ ಮಂಡಲ ಉಪಾಧ್ಯಕ್ಷರಾದ ಬಿ.ಕೆ. ಶಿವಕುಮಾ‌ರ್ ಮಾತನಾಡಿ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ (ಕ್ಯಾಷ್) ಎಲ್ಲ ತರಹ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯುವಂತೆ ಒಳಪಡಿಸಲು ಒಪ್ಪಂದ ಮಾಡಿಕೊಳ್ಳಬೇಕು ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರಿಗೆ ಮನವಿ ಮಾಡಿಕೊಂಡರು.
ವಿಧಾನ ಪರಿಷತ್‌ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಕ್ಯಾಷ್ ಲೆಸ್ ಯೋಜನೆಯಡಿ ಸರ್ಕಾರಿ ನೌಕರರಿಗೆ ನಿಯಮಾ ನುಸಾರವಾಗಿ ಚಿಕಿತ್ಸೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶ್ರೀಕಾಂತ್ ಮಾತನಾಡಿ, ಸರ್ಕಾರಿ ನೌಕರರ ಸಂಘ, ನೌಕರರ ಸಹಕಾರಿ ಸಂಘ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘಗಳು ಸಿ.ಎಸ್. ಷಡಾಕ್ಷರಿ ಅವರು ಹಾಗೂ ಆರ್.ಮೋಹನ್ ಕುಮಾರ್ ಮುಂದಾಳ ತ್ವದಲ್ಲಿ ಅತ್ಯಂತ ಮುನ್ನಡೆಯುತ್ತಿವೆ. ಅವರ ಬದ್ಧತೆ ಹಾಗೂ ನಿಸ್ವಾರ್ಥ ಸೇವಾ ಮನೋಭಾವ ಕಾರಣ ಎಂದರು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮಂಜುನಾಥ್ ಗೌಡ, ಸೂಡಾ ಆಯುಕ್ತರಾದ ಮಂಜುನಾಥ್, ಭೋವಿ ನಿಗಮದ ಮಾಜಿ ಅಧ್ಯಕ್ಷರಾದ ರವಿಕುಮಾ‌ರ್ ಸೇರಿದಂತೆ ಪ್ರಮುಖ ಗಣ್ಯರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಚ್ಚಕಟ್ಟು ಹಾಗೂ ರುಚಿಯಾದ ಭೋಜನ ವ್ಯವಸ್ಥೆಗೆ ಸರ್ವ ಸದಸ್ಯರು ಹಾಗೂ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಂದು ದೂರದೃಷ್ಟಿತ್ವದೊಂದಿಗೆ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘವನ್ನು ಹುಟ್ಟುಹಾಕಿದ್ದರು. 2014 ರಲ್ಲಿ ಆರಂಭವಾದ ಸಹಕಾರಿಯು ಅತ್ಯಂತ ಕಡಿಮೆ ಅವಧಿಯಲ್ಲಿ ಅಭಿವೃದ್ಧಿಯತ್ತ ಸಾಗಿದೆ. ಇಂದು ದುಡಿಯುವ ಬಂಡವಾಳ 31 ಕೋಟಿ ರೂ ಇದ್ದು, ವಾರ್ಷಿಕ 1 ಕೋಟಿ 70 ಲಕ್ಷ ನಿವ್ವಳ ಲಾಭದಲ್ಲಿದೆ, ಸರಳ ಬಡ್ಡಿಯೊಂದಿಗೆ ಎಲ್ಲ ನೌಕರ ಸದಸ್ಯರಿಗೂ ಕೈಗೆಟುವ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಹೌಸಿಂಗ್ ಲೋನ್ ನೀಡಲಾಗುತ್ತಿದ್ದು, ಫಿಕ್ಸೆಡ್ ಡೆಪಾಸಿಟ್ ಮೇಲೂ ಆಕರ್ಷಕ ಬಡ್ಡಿ ದರ ನೀಡಲಾಗುತ್ತಿದೆ. ಮತ್ತೊಂದು ಗಮನಿಸಬೇಕಾದ ಅಂಶವೆಂದರೆ ದಾಖಲಾತಿಗಳಲ್ಲಿ ಯಾವುದೇ ಗೊಂದಲಗಳಿಲ್ಲದೇ ಅತ್ಯಂತ ಪಾರದರ್ಶಕವಾಗಿ ನಿರ್ವಹಿಸಲಾಗುತ್ತಿದೆ. ಇದೂವರೆಗೂ ನಿಧಿಗೆ, ತೇವರಚಟ್ನಳ್ಳಿ, ಸೋಮಿನಕೊಪ್ಪ, ಮತ್ತೋಡಲ್ಲಿ ಒಟ್ಟು ಸುಸಜ್ಜಿತ ಬಡಾವಣೆಗಳನ್ನು ನಿರ್ಮಿಸಿ ನೌಕರರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಸಾಕಷ್ಟು ನೌಕರರು ಮನೆಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿರುವುದು ಸಂತಸದ ಸಂಗತಿ, ಅಲ್ಲದೇ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘವು ವಾರ್ಷಿಕವಾಗಿ 80 ಲಕ್ಷ ರೂ. ನಿವ್ವಳ ಲಾಭದಲ್ಲಿದ್ದು, ಇದು ಎಲ್ಲರ ಸಹಕಾರದಿಂದ ಸಾಧ್ಯವಾಗಿದೆ.
- ಆರ್. ಮೋಹನ್, ಅಧ್ಯಕ್ಷರು, ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ.

ಯಾವುದೇ ಸಂಘ- ಸಂಸ್ಥೆಗಳು ಅಭಿವೃದ್ಧಿ ಹೊಂದಬೇಕಾದರೆ ಏಕವ್ಯಕ್ತಿಯಿಂದ ಸಾಧ್ಯವಿಲ್ಲ, ಅದರ ಹಿಂದೆ ಪದಾಧಿಕಾರಿಗಳು, ಸದಸ್ಯರ ಸಹಕಾರವಿದೆ. ಮುಖ್ಯವಾಗಿ ಅಂದು ಸಹಕಾರಿ ಸಂಘವನ್ನು ಶೂನ್ಯ ಬಂಡವಾಳದಲ್ಲಿ ಆರಂಭಿಸಿದಾಗ ಅಂದು ನಮ್ಮ ಮೇಲೆ ಅಪಾರ ನಂಬಿನಿಕೆಯನ್ನಿಟ್ಟು 5 ಕೋಟಿ ರೂ ಸಾಲ ನೀಡಿದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರು ಹಾಗೂ ಎಂಎಡಿಬಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡರ ಸಹಕಾರ, ಬೆಂಬಲವನ್ನು ನಾವ್ಯಾರೂ ಎಂದಿಗೂ ಮರೆಯುವಂತಿಲ್ಲ . ಅಲ್ಲದೇ ಗೃಹ ನಿರ್ಮಾಣ ಸಹಕಾರಿ ಸಂಘದ ಮೂಲಕ ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಾವಿರಾರು ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಕಡಿಮೆ ಅವಧಿಯಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿರುವ ಸಂಘವೆಂದರೆ ನಮ್ಮ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘ ಎಂದು ಹೆಮ್ಮೆ ಎನಿಸುತ್ತಿದೆ.
- ಸಿ.ಎಸ್‌.ಷಡಾಕ್ಷರಿ, ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸಂಸ್ಥಾಪಕರು ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು,

ಸರ್ಕಾರಿ ನೌಕರರ ಸಂಘ, ನೌಕರರ ಸೌಹಾ ರ್ದ ಸಹಕಾರಿ ಸಂಘ ಹಾಗೂ ನೌಕರರ ಗೃಹ ನಿರ್ಮಾಣ ಸಹಕಾರಿ ಸಂಘಗಳು ಇಷ್ಟೊಂದು ದೊಡ್ಡ ಮಟ್ಟಕ್ಕೆ ಬೆಳೆಯುವಲ್ಲಿ ಸಿ.ಎಸ್‌.ಷಡಾಕ್ಷರಿ ಅವರ ಪಾತ್ರ ಹಿರಿದಾಗಿದೆ. ನೌಕರರ ಬಗ್ಗೆ ನೈಜ ಕಾಳಜಿ, ಬದ್ಧತೆ ಅವರಲ್ಲಿರುವುದ ರಿಂದ ಸಂಘಗಳು ಲಾಭದಲ್ಲಿ ಮುನ್ನಡೆಯಲು ಸಾಧ್ಯವಾಗಿದೆ. ಸರ್ಕಾರಿ ನೌಕರರಿಗೆ ಸೌಲಭ್ಯ ದೊರೆಯುವಲ್ಲಿ ಷಡಾಕ್ಷರಿ ಅವರ ಕಾಳಜಿ ದೊಡ್ಡರು, ಸಾಮಾಜಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಜನರಿಗೆ ಸಿಗುವಂತಾಗಲಿ.
ಆರ್.ಎಂ.ಮಂಜುನಾಥಗೌಡ, ಅಧ್ಯಕ್ಷರು, ಡಿಸಿಸಿ ಬ್ಯಾಂಕ್ ಹಾಗೂ ಅಧ್ಯಕ್ಷರು ಎಂಎಡಿಬಿ

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.