ಸೈಲ್-ವಿಐಎಸ್‌ಎಲ್ ಯಲ್ಲಿ ಇಂಜಿನಿಯರ್ಸ್ ದಿನಾಚರಣೆ: ಸರ್ ಎಂ. ವಿಶ್ವೇಶ್ವರಯ್ಯರಿಗೆ ಗೌರವ
ಭದ್ರಾವತಿ:ಭಾರತದ ಶ್ರೇಷ್ಠ ಇಂಜಿನಿಯರ್, ರಾಜನೀತಿಜ್ಞ ಹಾಗೂ ದಾರ್ಶನಿಕ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಇಂಜಿನಿಯರ್ಸ್ ದಿನಾಚರಣೆಯನ್ನು ಸೈಲ್-ವಿಐಎಸ್‌ಎಲ್ ನಲ್ಲಿ ಆಚರಿಸಲಾಯಿತು.
ವಿಐಎಸ್‌ಎಲ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಪಾಲಕ ನಿರ್ದೇಶಕ ಶ್ರೀ ಅನೂಪ್ ಕುಮಾರ್, ಮುಖ್ಯ ಮಹಾಪ್ರಬಂಧಕ (ಮಾನವ ಸಂಪನ್ಮೂಲ) ಶ್ರೀ ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕ (ಸ್ಥಾವರ) ಶ್ರೀ ಪ್ರಮೋದ್ ಕುಮಾರ್ ಸಿಂಗ್, ವಿಐಎಸ್‌ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಶ್ರೀ ಅಮೃತ್ ಕುಮಾರ್ ಹಾಗೂ ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಶ್ರೀ ಅಜಯ್ ಡಿ. ಸೋಂಕುವಾರ್ ಅವರು ಸರ್ ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಇಂಜಿನಿಯರಿಂಗ್ ಕ್ಷೇತ್ರ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಅವರು ನೀಡಿದ ಅಪಾರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಅವರ ಕಾರ್ಯಕ್ಷಮತೆ, ಶಿಸ್ತು ಮತ್ತು ದೂರದೃಷ್ಟಿ ಇಂದಿನ ಹಾಗೂ ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು, ಕಾರ್ಮಿಕರು ಹಾಗೂ ಗುತ್ತಿಗೆ ಕಾರ್ಮಿಕರು ಭಾಗವಹಿಸಿ ಮಹಾನ್ ಇಂಜಿನಿಯರ್ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಗೌರವ ನಮನ ಸಲ್ಲಿಸಿದರು.
ಇಂಜಿನಿಯರ್ಸ್ ದಿನಾಚರಣೆಯ ಮೂಲಕ ವಿಐಎಸ್‌ಪಿ ಸಮುದಾಯವು ರಾಷ್ಟ್ರ ನಿರ್ಮಾಣದಲ್ಲಿ ಇಂಜಿನಿಯರ್‌ಗಳ ಪಾತ್ರವನ್ನು ಸ್ಮರಿಸಿ, ಸರ್ ಎಂ. ವಿಶ್ವೇಶ್ವರಯ್ಯ ಅವರ ಆದರ್ಶಗಳನ್ನು ಗೌರವಿಸಿತು.

Leave a Comment