ಮೋದಿಯವರ 25 ವರ್ಷಗಳ ಸಾರ್ವಜನಿಕ ಸೇವೆ ಸ್ಮರಣೆ: ಶಿವಮೊಗ್ಗದಲ್ಲಿ ‘ಸೇವಾ ಜ್ಯೋತಿ ಯಾತ್ರೆ’ಗೆ ಚಾಲನೆ

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸುದೀರ್ಘ ಹಾಗೂ ಸಮರ್ಪಿತ ಸಾರ್ವಜನಿಕ ಸೇವೆಯನ್ನು ಗೌರವಿಸುವ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ **‘ಸೇವಾ ಜ್ಯೋತಿ ಯಾತ್ರೆ – ವಿಕಸಿತ ಭಾರತ ಸಂಕಲ್ಪ ಅಭಿಯಾನ’**ಕ್ಕೆ ಚಾಲನೆ ನೀಡಲಾಯಿತು.

ಶಿವಮೊಗ್ಗದ ಗೋಪಿ ವೃತ್ತದಲ್ಲಿ ದೀಪ ಬೆಳಗಿಸುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಅವರು ಯಾತ್ರೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ 2047ರ ವೇಳೆಗೆ ‘ವಿಕಸಿತ ಭಾರತ’ ನಿರ್ಮಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪರಿಕಲ್ಪನೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು. ದೇಶದ ಸಶಕ್ತೀಕರಣಕ್ಕಾಗಿ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡುವ ಸಂಕಲ್ಪವನ್ನು ಇದೇ ವೇಳೆ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಕೆ.ಬಿ. ಅಶೋಕ್ ನಾಯಕ್, ಆರ್.ಕೆ. ಸಿದ್ಧರಾಮಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರಾದ ಟಿ.ಡಿ. ಮೇಘರಾಜ್ ಸೇರಿದಂತೆ ಪಕ್ಷದ ಹಿರಿಯ ನಾಯಕರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.