ಮೈಸೂರು ದಸರಾ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರ ಕಲಾ ಪ್ರದರ್ಶನ ಯಶಸ್ವಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ಅಭಿನಂದನೆ

ಶಿವಮೊಗ್ಗ,ಅ.22: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಭವ್ಯ ಜಂಬೂಸವಾರಿಯಲ್ಲಿ ಶಿವಮೊಗ್ಗದ ಮಹಿಳಾ ಡೊಳ್ಳು ಕಲಾವಿದರು ಅದ್ಭುತ ಪ್ರದರ್ಶನ ನೀಡಿ, ನಾಡಿನ ಗಮನ ಸೆಳೆದಿದ್ದಾರೆ.
ಮೈಸೂರು ಅರಮನೆಯ ಆವರಣದಲ್ಲಿ ನಡೆದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಅರಮನೆ ವಂಶಸ್ಥರು, ಸಚಿವರು ಹಾಗೂ ಹಿರಿಯ ಗಣ್ಯರ ಸಮ್ಮುಖದಲ್ಲಿ ಮಹಿಳಾ ಡೊಳ್ಳು ಕುಣಿತದ ಕಲಾ ಪ್ರಕಾರವನ್ನು ಅತ್ಯಂತ ಆಕರ್ಷಕವಾಗಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಈ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ತಂಡದ ಮುಖ್ಯಸ್ಥರಾದ ಶ್ರೀಮತಿ ಪಣಿಯಮ್ಮ, ಶ್ರೀಮತಿ ಶಾಂತಾ ಹಾಗೂ ಶ್ರೀಮತಿ ದಾಕ್ಷಾಯಿಣಿ ಹಾಗೂ ಡೊಳ್ಳು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಮಹಿಳಾ ಕಲಾವಿದರಿಗೆ ಜಿಲ್ಲಾಡಳಿತ ಹಾಗೂ ಇಲಾಖೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಜೊತೆಗೆ, ಈ ಕಲಾತಂಡಕ್ಕೆ ಸೂಕ್ತ ಮಾರ್ಗದರ್ಶನ ನೀಡಿದ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಾಗೂ ಸಹಕರಿಸಿದ ಜಿಲ್ಲಾಡಳಿತಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್ ಅವರು ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.