ಅಣ್ಣಾನಗರದ ಚಾನಲ್ ಬಳಿ ಯುವಕನ ಶವ ಪತ್ತೆ: ಕೊಲೆ ಶಂಕೆ

ಶಿವಮೊಗ್ಗ: ನಗರದ ಅಣ್ಣಾನಗರದ ಚಾನಲ್‌ ಬಳಿ 35 ವರ್ಷದ ಯುವಕನ ಶವ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಯುವಕನನ್ನು ಹುಸ್ನಾನ್ ಅಲಿ (35) ಎಂದು ಗುರುತಿಸಲಾಗಿದೆ. ಮದ್ಯ ಸೇವನೆ ವೇಳೆ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿ, ಬಳಿಕ ಶವವನ್ನು ಚಾನಲ್‌ಗೆ ಎಸೆದಿರುವ ಸಾಧ್ಯತೆ ಇದೆ ಎಂಬ ಅನುಮಾನ ವ್ಯಕ್ತವಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಸಾವಿನ ಹಿನ್ನೆಲೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಯುವಕನ ಸಾವಿನ ಬಗ್ಗೆ ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ನಂತರವೇ ಸ್ಪಷ್ಟವಾಗಬೇಕಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.