ನಿವೃತ್ತ ಪೊಲೀಸ್ ಅಧಿಕಾರಿ ಎಸ್. ಹೇಮಂತರಾಜ್ ನಿಧನ
ಶಿವಮೊಗ್ಗ: ಕೆಎಸ್ಆರ್ಪಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ್ದ ಹಿರಿಯ ಪೊಲೀಸ್ ಅಧಿಕಾರಿ ಶ್ರೀ ಎಸ್. ಹೇಮಂತರಾಜ್ (70) ಅವರು ದಿನಾಂಕ 25-11-2026ರ ಮಧ್ಯರಾತ್ರಿ 12 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರು 20-04-1956ರಂದು ಜನಿಸಿದ್ದು, 22-10-1980ರಂದು ಪೊಲೀಸ್ ಇಲಾಖೆಯ ಕೆಎಸ್ಆರ್ಪಿ ವಿಭಾಗಕ್ಕೆ ಸೇರ್ಪಡೆಗೊಂಡಿದ್ದರು. ಮಾಚೇನಹಳ್ಳಿಯ 8ನೇ ಬೆಟಾಲಿಯನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು 30-04-2005ರಂದು ಸ್ವಯಂ ನಿವೃತ್ತಿ ಹೊಂದಿದ್ದರು.
ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಿವಾಸಿಯಾಗಿದ್ದ ಇವರು ಪ್ರಸ್ತುತ ಕೆಎಸ್ಆರ್ಪಿ ಕ್ವಾರ್ಟರ್ಸ್ನಲ್ಲಿ ವಾಸವಾಗಿದ್ದರು. ನಿವೃತ್ತಿಯ ನಂತರ 2016ರಿಂದ 2018ರವರೆಗೆ ಶಿವಮೊಗ್ಗದ ಟೀಮ್ ಸೆಕ್ಯೂರಿಟಿಯಲ್ಲಿ ಸೂಪರ್ವೈಸರ್ ಆಗಿ ಕಾರ್ಯನಿರ್ವಹಿಸಿ ಉತ್ತಮ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ ಶ್ರೀಮತಿ ಸುವರ್ಣ, ಪುತ್ರರಾದ ಪ್ರಕಾಶ್ ಮತ್ತು ಸುನಿಲ್ (ಎಎಚ್ಸಿ, ಕೆಎಸ್ಆರ್ಪಿ) ಸೇರಿದಂತೆ ಅಪಾರ ಬಂಧುಬಳಗ, ಸ್ನೇಹಿತರು ಹಾಗೂ ಸಹೋದ್ಯೋಗಿಗಳನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಪೊಲೀಸ್ ಇಲಾಖೆಯ ನಿವೃತ್ತ ಹಾಗೂ ಹಾಲಿ ಸಿಬ್ಬಂದಿ, ಸ್ನೇಹಿತರು ಮತ್ತು ಹಿತೈಷಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Leave a Comment