ಯುವತಿ ಕಾಣೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು
ಶಿವಮೊಗ್ಗ, ನ. 13: ಜಿಲ್ಲೆಯ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳುವಾಣಿ ಗ್ರಾಮದ 20 ವರ್ಷದ ಕೀರ್ತನಾ ಎಂಬ ಯುವತಿ ಕಾಣೆಯಾಗಿದ್ದು, ಆಕೆಯ ಪತ್ತೆಗೆ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಕೀರ್ತನಾ ಅವರು ಅಕ್ಟೋಬರ್ 23ರಂದು ಮನೆ ಬಳಕೆಯ ವಸ್ತುಗಳನ್ನು ತರಲೆಂದು ಶಿರಾಳಕೊಪ್ಪಕ್ಕೆ ತೆರಳಿದ್ದು, ಇದುವರೆಗೂ ಮನೆಗೆ ವಾಪಸ್ಸಾಗಿಲ್ಲ. ಕುಟುಂಬದವರು ಹುಡುಕಾಟ ನಡೆಸಿದರೂ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಕಾಣೆಯಾದ ಯುವತಿಯು ಸುಮಾರು 5.5 ಅಡಿ ಎತ್ತರ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹಾಗೂ ಕೋಲು ಮುಖ ಹೊಂದಿದ್ದಾರೆ. ಮನೆಯಿಂದ ತೆರಳುವಾಗ ಕೆಂಪು ಬಣ್ಣದ ಚೂಡಿದಾರ ಧರಿಸಿದ್ದರು.
ಯುವತಿಯ ಬಗ್ಗೆ ಯಾರಿಗಾದರೂ ಸುಳಿವು ಅಥವಾ ಮಾಹಿತಿ ದೊರೆತಲ್ಲಿ ತಕ್ಷಣ ಶಿರಾಳಕೊಪ್ಪ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು:
- 8722983310
- 9480803367
ಯುವತಿಯ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

Leave a Comment